ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೊರಟಗೆರೆ | ಬಾಯ್ಲರ್ ಸ್ಫೋಟ: ಯುವಕನಿಗೆ ಗಂಭೀರ ಗಾಯ

Published 9 ಜುಲೈ 2024, 12:34 IST
Last Updated 9 ಜುಲೈ 2024, 12:34 IST
ಅಕ್ಷರ ಗಾತ್ರ

ಕೊರಟಗೆರೆ: ಪಟ್ಟಣದ ಖಾಸಗಿ ಹಾಲಿನ ಡೇರಿಯಲ್ಲಿ ಆಕಸ್ಮಿಕವಾಗಿ ಬಾಯ್ಲರ್ ಸ್ಫೋಟಗೊಂಡು ಯತೀಶ (23) ತೀವ್ರ ಗಾಯಗೊಂಡಿದ್ದಾರೆ.

ತಾಲ್ಲೂಕಿನ ಮಲ್ಲೇಶಪುರ ನಿವಾಸಿ ಯತೀಶ ಪಟ್ಟಣದ ಶಿವಗಂಗಾ ಚಿತ್ರಮಂದಿರದ ಬಳಿಯ ಖಾಸಗಿ ಹಾಲಿನ ಡೇರಿಯಲ್ಲಿ ಕೆಲಸ ಮಾಡುತ್ತಿದ್ದರು.

ಸೋಮವಾರ ತಡ ರಾತ್ರಿ ಸ್ಟೀಂ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.  ಸದ್ಯಕ್ಕೆ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಫೋಟದ ತೀವ್ರತೆಗೆ ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ. ಕೊಠಡಿಯಲ್ಲಿದ್ದ ಹಾಲಿನಿಂದ ತಯಾರಿಸಿದ ಖಾದ್ಯ ಇತರೆ ವಸ್ತುಗಳು ಹಾಳಾಗಿ ನಷ್ಟ ಉಂಟಾಗಿದೆ. ಸ್ಥಳಕ್ಕೆ ಪಿಎಸ್ಐ ಜಿ.ಚೇತನ್ ಕುಮಾರ್ ಭೇಟಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT