ಗುರುವಾರ , ಅಕ್ಟೋಬರ್ 1, 2020
22 °C
ಪ್ರಜಾವಾಣಿ ಫಲಶ್ರುತಿ

ಚಿರತೆ ಸೆರೆಗೆ ಬೋನ್ ಅಳವಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಧುಗಿರಿ: ತಾಲ್ಲೂಕು ಕಸಬಾ ವ್ಯಾಪ್ತಿಯ ಕಾರಮರಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಗುರುವಾರ ಬೋನ್‌ಗಳನ್ನು ಇಟ್ಟರು.

ಈ ಗ್ರಾಮದಲ್ಲಿ ಚಿರತೆ ಹಾವಳಿ ಬಗ್ಗೆ ಆ. 5ರಂದು ಪ್ರಜಾವಾಣಿ ಪತ್ರಿಕೆಯಲ್ಲಿ ವರದಿ  ಪ್ರಕಟವಾಗಿತ್ತು. ಇದ ರಿಂದ ಎಚ್ಚೆತ್ತು ಕೊಂಡ ಅಧಿಕಾರಿಗಳು ಈ ಕ್ರಮಕ್ಕೆ ಮುಂದಾದರು.

ತಹಶೀಲ್ದಾರ್ ಜಿ.ವಿಶ್ವನಾಥ್ ಹಾಗೂ ವಲಯ ಅರಣ್ಯಾಧಿಕಾರಿ ವಾಸದೇವಮೂರ್ತಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದಲ್ಲಿ ಸಾರ್ವಜನಿಕ ಸಭೆ ನಡೆಸಿದರು.

‘ಚಿರತೆಗಳ ಹಾವಳಿಯಿಂದ ಯಾರು ಕೂಡ ಭಯಪಡುವ ಅಗತ್ಯ ಅಲ್ಲ. ಗ್ರಾಮಕ್ಕೆ ಚಿರತೆಗಳು ಬಾರದಂತೆ ಮುಳ್ಳಿನ ತಂತಿ ಬೇಲಿ ಹಾಕಿಸಲು ಪ್ರಯತ್ನ ಮಾಡಲಾಗುವುದು. ಅಲ್ಲದೆ, ಅರಣ್ಯ ಇಲಾಖೆಯ ಸಿಬ್ಬಂದಿ ಗಸ್ತಿನಲ್ಲಿ ಇರಲು ವ್ಯವಸ್ಥೆ ಮಾಡಲಾಗಿದೆ’ ಎಂದರು.

ಆಹಾರ ಶಿರಸ್ತೇದಾರ್ ಗಣೇಶ್, ಕಂದಾಯ ನಿರೀಕ್ಷಕ ಸಿದ್ದರಾಜು, ಉಪ ವಲಯ ಅರಣ್ಯಾಧಿಕಾರಿ ಮುತ್ತುರಾಜ್, ಸಿಬ್ಬಂದಿ ಆನಂದ್, ಹರೀಶ್ ಹಾಜರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.