ಶನಿವಾರ, ನವೆಂಬರ್ 26, 2022
23 °C

ಈಜಾಡಲು ಹೋಗಿ ಬಾಲಕ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಜಯಮಂಗಲಿ ನದಿಯಲ್ಲಿ ಈಜಾಡಲು ಹೋಗಿ ಬಾಲಕ ಮೃತಪಟ್ಟಿರುವ ಘಟನೆ ಮಧುಗಿರಿ ತಾಲ್ಲೂಕಿನ ಮುದ್ದೇನಹಳ್ಳಿ ಗ್ರಾಮದ ಸಮೀಪ ಶುಕ್ರವಾರ ನಡೆದಿದೆ.

ಚಿಕ್ಕದಾಳವಟ್ಟ ಗ್ರಾಮದ ನಿವಾಸಿಯಾದ ಶಂಕರಪ್ಪ ಅವರ ಪುತ್ರ ಚೇತನ (14) ಮೃತಪಟ್ಟ ದುರ್ದೈವಿ. ದ್ವಿಚಕ್ರ ವಾಹನ ತೊಳೆದು ಜಯಮಂಗಲಿ ನದಿಯಲ್ಲಿ ಇಬ್ಬರು ಸ್ನೇಹಿತರೊಂದಿಗೆ ಈಜಾಡಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಕೊಡಿಗೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು