ವಿದೇಶಿ ಸಿಗರೇಟ್ ಪ್ಯಾಕ್‌ಗಳ ವಶ

7

ವಿದೇಶಿ ಸಿಗರೇಟ್ ಪ್ಯಾಕ್‌ಗಳ ವಶ

Published:
Updated:

ತುಮಕೂರು: ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಶಿಕ್ಷಣ ಇಲಾಖೆ ಅಧಿಕಾರಿಗಳು ಜಂಟಿಯಾಗಿ ನಗರದಲ್ಲಿ ನಡೆಸಿದ ಕಾರ್ಯಾಚರಣೆಯಲ್ಲಿ ವಿದೇಶಿ ಸಿಗರೇಟ್ ಪ್ಯಾಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಶಿರಾ ಗೇಟ್‌ನ ಕುಮಾರ್ ಟೀ ಸ್ಟಾಲ್, ನಂದಿನಿ ಜ್ಯೂಸ್ ಸೆಂಟರ್, ಖಾಸಗಿ ಬಸ್‌ನಿಲ್ದಾಣದ ಕೆಲ ಪಾನ್ ಶಾಪ್‌ಗಳಲ್ಲಿ ಮಾರಾಟ ಮಾಡಲಾಗುತ್ತಿದ್ದ ವಿವಿಧ ಬ್ರಾಂಡ್‌ಗಳ ವಿದೇಶಿ ಸಿಗರೇಟ್ ಪ್ಯಾಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವವರಿಗೆ ಹಾಗೂ ಅಂಗಡಿ ಮಾಲೀಕರಿಗೆ ದಂಡ ವಿಧಿಸಲಾಗಿದೆ. ಒಟ್ಟು ₹ 43,250 ದಂಡ ವಸೂಲಾಗಿದೆ. ಅಂಗಡಿ ಮಾಲೀಕರಿಗೆ ಆಯಕಟ್ಟಿನ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡದಂತೆ ಎಚ್ಚರಿಕೆ ನೀಡಲಾಯಿತು.

ಕಾರ್ಯಾಚರಣೆಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಎಂ.ಆರ್.ರವಿಪ್ರಕಾಶ್, ಪುಂಡಲೀಕ ಎಂ.ಲಕಾಟಿ, ಆಹಾರ ಸುರಕ್ಷತಾ ಅಧಿಕಾರಿ ನಾಗರಾಜು, ರಾಜಣ್ಣ ಇದ್ದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !