ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಡೆಯೂರು ಸಿದ್ಧಲಿಂಗೇಶ್ವರ ದೇವಸ್ಥಾನದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ

Last Updated 18 ಅಕ್ಟೋಬರ್ 2019, 5:38 IST
ಅಕ್ಷರ ಗಾತ್ರ

ಕುಣಿಗಲ್‌: ಎಡೆಯೂರುಸಿದ್ಧಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ₹10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ದೇವಾಲಯ ಪ್ರವೇಶ ಪ್ರಾಂಗಣ, ನಡು ಪ್ರಾಂಗಣ ಮತ್ತು ಸಿದ್ಧಲಿಂಗೇಶ್ವರ ಸ್ವಾಮಿಯ ಪವಾಡ ದೃಶ್ಯಗಳನ್ನೊಳಗೊಂಡ ಪ್ರದಕ್ಷಿಣಾ ಪ್ರಾಂಗಣವನ್ನು ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಿದರು.

ಎಡೆಯೂರು ಸಿದ್ಧಲಿಂಗೇಶ್ವರಸ್ವಾಮಿ ದರ್ಶನ ಪಡೆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೈತ್ರಾದೇವಿ ಬಿ.ಎಸ್.ಯಡಿಯೂರಪ್ಪ ಸಮುದಾಯ ಭವನ ನಿರ್ಮಾಣಕ್ಕೆ ಶಿಲಾನ್ಯಾಸ ನೇರವೇರಿಸಿದರು.

ಮುಖ್ಯಮಂತ್ರಿ ಅವರೊಂದಿಗೆ ಪುತ್ರರಾದ ಸಂಸದ ಬಿ.ವೈ.ರಾಘವೇಂದ್ರ, ವಿಜಯೇಂದ್ರ ಹಾಗೂ ಕುಟುಂಬದ ಸದಸ್ಯರು ದೇವಸ್ಥಾನದಲ್ಲಿ ನಡೆಯುವ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.

ಡಂಬಳ- ಗದಗ ಜಗದ್ಗುರು ತೋಂಟದಾರ್ಯ ಸಿದ್ಧರಾಮ ಸ್ವಾಮೀಜಿ, ಬಾಳೆಹೊನ್ನೂರು ಶಾಖಾಮಠದ ರೇಣುಕಾ ಶಿವಾಚಾರ್ಯ ಸ್ವಾಮೀಜಿ ಸೇರಿ ಹಲವರು ಸಾನಿಧ್ಯವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT