ಬುಧವಾರ, ಫೆಬ್ರವರಿ 19, 2020
24 °C
ಬಿಎಸ್‌ಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಚ್.ಇಕ್ಬಾಲ್ ಆರೋಪ

ಆರ್‌ಎಸ್‌ಎಸ್ ಕುಮ್ಮಕ್ಕಿನಿಂದ ಮೀಸಲಾತಿ ವಿರುದ್ಧ ತೀರ್ಪು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಮೀಸಲಾತಿ ಮೂಲ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವುದು ಸಾಮಾಜಿಕ ಆಶಯಕ್ಕೆ ವಿರುದ್ಧವಾಗಿದೆ ಎಂದು ಬಿಎಸ್‌ಪಿ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಎಚ್.ಇಕ್ಬಾಲ್ ಆರೋಪಿಸಿದರು.

ದೇಶದಲ್ಲಿ ಪರಿಶಿಷ್ಟ ಜಾತಿ, ಪಂಗಡಗಳ ವಿರುದ್ಧ ದೌರ್ಜನ್ಯ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಬಿಜೆಪಿ, ಆರ್‌ಎಸ್‌ಎಸ್ ಆಲೋಚನೆಯಂತೆಯೇ ನ್ಯಾಯಾಲಯ ತೀರ್ಪು ನೀಡುತ್ತಿರುವುದು ಆತಂಕಕಾರಿ ಸಂಗತಿ ಎಂದು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

ಕೇಂದ್ರ ಸರ್ಕಾರ ಮೀಸಲಾತಿ ವಿಚಾರದಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳದೇ ಇರುವುದರಿಂದ ಬಹುಸಂಖ್ಯಾತ ದಲಿತರು ಆತಂಕಕ್ಕೆ ಒಳಗಾಗಿದ್ದಾರೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರ ಸರ್ಕಾರ ಸರಿಯಾದ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.

ಬಿಎಸ್‌ಪಿ ಜಿಲ್ಲಾ ಉಸ್ತುವಾರಿ ರಾಜಸಿಂಹ, ಮೀಸಲಾತಿ ಮೂಲ ಹಕ್ಕಲ್ಲ ಎನ್ನುವುದು ಆತಂಕಕಾರಿ ಸಂಗತಿ. ಸರ್ಕಾರ ಸರಿಯಾದ ದಾಖಲಾತಿ ಒದಗಿಸದೆ ಇರುವುದರಿಂದ ಇಂತಹ ತೀರ್ಪು ಬಂದಿದೆ’ ಎಂದರು.

‘ಅಧಿಕಾರದಲ್ಲಿ ಇರುವರು ಸಂವಿಧಾನ ಮುಗಿಸಲು ಬಂದಿದ್ದೇವೆ ಎನ್ನುತ್ತಾರೆ. ಮಹಾತ್ಮಗಾಂಧಿ ಅವರಿಂದ ದೇಶ ಬದಲಾಗಿದೆ. ಆದರೆ, ದೇಶದಲ್ಲಿ ಗಾಂಧಿಯನ್ನು ಒಪ್ಪದಂತಹ ಸ್ಥಿತಿ ಇದೆ. ಇದರ ಹಿಂದೆ ಆರ್‌ಎಸ್‌ಎಸ್ ಕೈವಾಡವಿದೆ’ ಎಂದು ಆರೋಪಿಸಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಂಗಧಾಮಯ್ಯ, ‘2014ರಿಂದ ಮೀಸಲಾತಿ, ಅಸ್ಪೃಶ್ಯತೆ ಕಾಯ್ದೆ ಬಗ್ಗೆ ಚರ್ಚೆ ಹೆಚ್ಚುತ್ತಿದೆ. ಇದು ಬಿಜೆಪಿಯ ಹಿಡನ್ ಅಜೆಂಡ ಆಗಿದೆ. ಮೀಸಲಾತಿ ವಿರುದ್ಧ ಜನರಲ್ಲಿ ಆಕ್ರೋಶ ಮೂಡಿಸಲು ಪ್ರಯತ್ನಿಸಲಾಗುತ್ತಿದೆ’ ಎಂದು ದೂರಿದರು.

ದೇಶದಲ್ಲಿ ಮೀಸಲಾತಿ ಸದ್ಬಳಕೆ ಆಗಿಲ್ಲ. ಸಂವಿಧಾನದ ಪ್ರಕಾರ ಶಿಕ್ಷಣ ಉದ್ಯೋಗ ಮೂಲ ಹಕ್ಕು. ಆದರೆ ಅದನ್ನು ನಿರಾಕರಿಸಲಾಗುತ್ತಿದೆ. ಬಿಜೆಪಿಯು ಮೀಸಲಾತಿ ಬಗ್ಗೆ ಮಾತನಾಡುವುದನ್ನು ಬಿಟ್ಟು ಆರ್ಥಿಕ ಸಮಾನತೆ ತರಲಿ ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ರಾಜ್ಯ ಕಾರ್ಯದರ್ಶಿ ಸೂಲಯ್ಯ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು