ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ಮುದುಗೆರೆಗೆ ಬಿ.ಎಸ್.ಯಡಿಯೂರಪ್ಪ ಭೇಟಿ

Published 11 ಫೆಬ್ರುವರಿ 2024, 13:41 IST
Last Updated 11 ಫೆಬ್ರುವರಿ 2024, 13:41 IST
ಅಕ್ಷರ ಗಾತ್ರ

ತುರುವೇಕೆರೆ: ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಫೆ 13ರಂದು ನಡೆಯುವ ಮುದುಗೆರೆ ವೀರಭದ್ರ ಹಾಗೂ ಭದ್ರಕಾಳಿ ನವಗ್ರಹ ದೇವಾಲಯ ಶಿಲಾಮಂಟಪದ ಉದ್ಘಾಟನಾ ಸಮಾರಂಭಕ್ಕೆ ಬರಲಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಡಿ.ಲಕ್ಷ್ಮೀನಾರಾಯಣ್ ತಿಳಿಸಿದರು.

ಮುದುಗೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳವಾರ ಬೆಳಿಗ್ಗೆ 10.30ಕ್ಕೆ ದೇವಾಲಯದ ಆವರಣದಲ್ಲಿ ಹೋಮ ನಡೆಯಲಿದೆ. ನಂತರ ನಡೆಯುವ ಧಾರ್ಮಿಕ ಸಮಾರಂಭದಲ್ಲಿ ಶಾಸಕ ಎಂ.ಟಿ.ಕೃಷ್ಣಪ್ಪ, ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಸಂಸದ, ಜಿ.ಎಸ್.ಬಸವರಾಜು ಸೇರಿದಂತೆ ಜನಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ ಎಂದರು.

ಅದ್ದೂರಿ ಕಾರ್ಯಕ್ರಮದಲ್ಲಿ ತಾಲ್ಲೂಕಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದರು.

ಗೋಷ್ಠಿಯಲ್ಲಿ ದೇವಾಲಯ ಸಮಿತಿ ಅಧ್ಯಕ್ಷ ಎಂ.ಬಿ.ಚಿಕ್ಕವೀರಯ್ಯ, ಗುತ್ತಿಗೆದಾರ ಕೆಂಪೇಗೌಡ, ಕಾರ್ಯದರ್ಶಿ ಎಂ.ಸಿ.ಶಿವಲಿಂಗೇಗೌಡ, ಖಜಾಂಚಿ ಎಂ.ಸಿ.ನಾರಾಯಣ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT