ಪಾವಗಡ: ಪಟ್ಟಣದ ಅಗಸರ ಕುಂಟೆ ಸುತ್ತಲೂ ತಂತಿ ಬೇಲಿ ನಿರ್ಮಿಸಿ ಅನಾಹುತ ತಪ್ಪಿಸಬೇಕು ಎಂದು ವಿವಿಧ ಸಂಘ, ಸಂಸ್ಥೆಯ ಪದಾಧಿಕಾರಿಗಳು ಸೋಮವಾರ ಪುರಸಭೆ ಅಧ್ಯಕ್ಷ ರಾಮಾಂಜಿನಪ್ಪ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಅಗಸರ ಕುಂಟೆಗೆ ನಾಗಲಮಡಿಕೆ ಚೆಕ್ ಡ್ಯಾಂನಿಂದ ನೀರು ಹರಿಸಲಾಗುತ್ತಿದೆ. ಕುಂಟೆಯಲ್ಲಿರುವ ಬೃಹತ್ ಗುಂಡಿಗಳು ತುಂಬಿವೆ. ಪಟ್ಟಣಕ್ಕೆ ಹೊಂದಿಕೊಂಡಿರುವ ಕುಂಟೆ ಸಮೀಪ ಸಾಯಿಬಾಬಾ ದೇಗುಲ ಮತ್ತು ಬಡಾವಣೆಗಳಿವೆ. ಹೀಗಾಗಿ ಅವಘಡಗಳು ನಡೆಯುವ ಸಂಭವವಿದೆ ಎಂದುಹೇಳಿದರು.
ಈಗಾಗಲೇ ಸಾಕಷ್ಟು ಮಂದಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕುಂಟೆಗೆ ಬಿದ್ದಿದ್ದಾರೆ. ಕೆಲವರು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಕೆಲ ದಿನಗಳ ಹಿಂದೆ ಬಾಲಕ ಕುಂಟೆಗೆ ಬಿದ್ದು ಮೃತಪಟ್ಟಿದ್ದಾನೆ. ಇಷ್ಟಾದರೂ ಸಂಬಂಧಿಸಿದವರು ನಿರ್ಲಕ್ಷ್ಯ ಪ್ರದರ್ಶಿಸುತ್ತಿರುವುದು ಬೇಸರದ ಸಂಗತಿ ಎಂದುತಿಳಿಸಿದರು.
ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಶ್ರೀರಾಮಸೇನೆ ಅಧ್ಯಕ್ಷ ರಾಮಾಂಜಿ, ಪುರಸಭೆ ಸದಸ್ಯರಾದ ಪಿ.ಎಚ್. ರಾಜೇಶ್, ವೇಲುರಾಜ್, ಮುಖಂಡ ಅನಿಲ್, ಆಟೊ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜಉಪಸ್ಥಿತರಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.