ಸೋಮವಾರ, ನವೆಂಬರ್ 30, 2020
27 °C
ವಿಷಯ ಪ್ರಮುಖರ ಪ್ರಶಿಕ್ಷಣ ವರ್ಗ ತರಬೇತಿ ಶಿಬಿರದಲ್ಲಿ ನಳಿನ್‌ಕುಮಾರ್ ಕಟೀಲ್ ಟೀಕೆ

ಸದೃಢ ದೇಶ ನಿರ್ಮಾಣ: ಕಾಂಗ್ರೆಸ್ ವಿಫಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುಮಕೂರು: ಬಿಜೆಪಿ ಅಧಿಕಾರ ಹಿಡಿದಿರುವುದು ದೇಶವನ್ನು ಪರಿವರ್ತನೆಯ ಹಾದಿಗೆ ಕೊಂಡೊಯ್ಯಲು. ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ದೊರೆತಾಗಆ ಪಕ್ಷವು ತಾನು ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸಲಿಲ್ಲ. ಸದೃಢ ದೇಶ ನಿರ್ಮಾಣದಲ್ಲಿ
ಕಾಂಗ್ರೆಸ್ ವಿಫಲವಾಯಿತು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಟೀಕಿಸಿದರು.

ನಗರದಲ್ಲಿ ಭಾನುವಾರ ನಡೆದ ವಿಭಾಗ ಮಟ್ಟದ ವಿಷಯ ಪ್ರಮುಖರ ಪ್ರಶಿಕ್ಷಣ ವರ್ಗ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

‘ವಿಚಾರಗಳನ್ನು ಮರೆತು ಕಾಂಗ್ರೆಸ್ ಮುಳುಗುವ ಹಡಗಾಗಿದೆ. ಆದರೆ ಬಿಜೆಪಿ ದೇಶದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಮೂಲಕ ಓಡುವ ಹಡಗಾಗಿದೆ. ಕಾಂಗ್ರೆಸ್ ಪಕ್ಷ ತನ್ನ ಕಾರ್ಯಕರ್ತರನ್ನು ಬೆಳೆಸಲಿಲ್ಲ. ರಾಷ್ಟ್ರಮಾತೆಯನ್ನೂ ಪೂಜಿ
ಸದೆ ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಎಂದು ವ್ಯಕ್ತಿ ಪೂಜೆ ಮಾಡಿತು. ಆದರೆ ಬಿಜೆಪಿ ಕಾರ್ಯಕರ್ತರನ್ನು ವಿಚಾರಗಳ ಮೇಲೆ ಸದೃಢವಾಗಿ ಬೆಳೆಸುವ ಪಕ್ಷವಾಗಿದೆ’ ಎಂದರು.

ಕಾಂಗ್ರೆಸ್ ಪಕ್ಷ ತನ್ನ ಮಾತಿನಲ್ಲಿ, ಕಾರ್ಯಶೈಲಿಯಲ್ಲಿ ತಪ್ಪಿದ್ದರಿಂದ ಈಗ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ
ವಾಗುತ್ತಿದೆ. ಜಗತ್ತು ಗಮನಿಸುವ ರೀತಿಯಲ್ಲಿ ನರೇಂದ್ರ ಮೋದಿ ಅವರು ಆಡಳಿತ ನಡೆಸುತ್ತಿದ್ದಾರೆ. ಕಳೆದ 6 ವರ್ಷದಲ್ಲಿ ಒಂದೇ ಒಂದು ಭ್ರಷ್ಟಾಚಾರ ಆರೋಪ ಕೇಂದ್ರ ಸರ್ಕಾರದ ಮೇಲೆ ಇಲ್ಲ ಎಂದರು.

ನೋಟು ಅಮಾನ್ಯದಿಂದ ದೇಶದಲ್ಲಿ ಕಪ್ಪು ಹಣ, ಭ್ರಷ್ಟಾಚಾರ ನಿಯಂತ್ರಣವಾಗಿದೆ. ಇದುವರೆಗೂ ಯಾವ ಸರ್ಕಾರಗಳು ಮಾಡದ ‌ಸಾಧನೆಯನ್ನು ಬಿಜೆಪಿ ಸರ್ಕಾರ ಮಾಡಿದೆ. ಮಹಿಳೆಯರ ಖಾತೆಗೆ ನೇರವಾಗಿ ₹ 500 ಹಾಗೂ ರೈತರ ಖಾತೆಗೆ ₹ 6 ಸಾವಿರ ಜಮೆ ಮಾಡಿರುವ ಏಕೈಕ ಸರ್ಕಾರ ಅಂದರೆ ಅದು ಬಿಜೆಪಿ ಮಾತ್ರ ಎಂದು ಹೇಳಿದರು.

ಬೆಂಗಳೂರು ನಗರ, ಗ್ರಾಮಾಂತರ, ದಾವಣಗೆರೆ ಮತ್ತು ತುಮಕೂರು ಜಿಲ್ಲೆಯ ಕಾರ್ಯಕರ್ತರು ಶಿಬಿರದಲ್ಲಿ ಪಾಲ್ಗೊಂಡಿದ್ದರು.
ರಾಜ್ಯ ಬಿಜೆಪಿ ಮುಖಂಡ ಶ್ರೀಕಾಂತ್ ಕುಲಕರ್ಣಿ, ಪ್ರಧಾನ ಸಂಘಟಕ ಅರುಣ್‍ಕುಮಾರ್, ವಿಧಾನ ಪರಿಷತ್ ಮಾಜಿ ಸದಸ್ಯ ಸಿದ್ದರಾಮಣ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ. ಸುರೇಶ್‍ಗೌಡ ವೇದಿಕೆಯಲ್ಲಿ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.