ಭಾನುವಾರ, ಸೆಪ್ಟೆಂಬರ್ 26, 2021
21 °C

ಸರ್ಕಾರಿ ಬಸ್ ಚಲಾಯಿಸಿದ ಶಾಸಕ!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ತುರುವೇಕೆರೆ: ಪಟ್ಟಣದ ಬಸ್ ನಿಲ್ದಾಣದಲ್ಲಿ ಭಾನುವಾರ ಶಾಸಕ ಮಸಾಲ ಜಯರಾಮ್ ಎರಡು ಬಸ್‌ಗಳ ಸಂಚಾರಕ್ಕೆ ಚಾಲನೆ ನೀಡಿದರು.

ಈ ವೇಳೆ ತಾವೇ ಕೆಎಸ್‌ಆರ್‌ಟಿಸಿ ಬಸ್ ಅನ್ನು ಓಡಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಸಿಬ್ಬಂದಿ  ಹೊರತು ಪಡಿಸಿ ಅನ್ಯರು ಬಸ್ ಚಾಲನೆ ಮಾಡುವುದು ಇಲಾಖೆಯ ನಿಯಮದಂತೆ ಪ್ರಮಾದ ಆಗುತ್ತದೆ.

ದಬ್ಬೇಘಟ್ಟ ರಸ್ತೆಯಲ್ಲಿನ ನಿಲ್ದಾಣದಲ್ಲಿ ಬಸ್ ಸಂಚಾರಕ್ಕೆ ಚಾಲನೆ ನೀಡಿದ ಶಾಸಕರು ಪಕ್ಷದ ಕಾರ್ಯಕರ್ತರ ಒತ್ತಾಯದ ಮೇರೆಗೆ ನಿಲ್ದಾಣದ ಆವರಣದಲ್ಲಿಯೇ ಬಸ್ ಓಡಿಸಿದ್ದಾರೆ. ಬೆಂಬಲಿಗರು ಚಪ್ಪಾಳೆ ತಟ್ಟಿದ್ದಾರೆ.

ಎಪಿಎಂಸಿ ನಿರ್ದೇಶಕ ವಿ.ಟಿ.ವೆಂಕಟರಾಮ್, ಕಾಳಂಜಿಹಳ್ಳಿ ಸೋಮಣ್ಣ, ನಾಗಲಾಪುರ ಮಂಜಣ್ಣ, ತಿಮ್ಮೇಗೌಡ, ಡಿಪೊ ವ್ಯವಸ್ಥಾಪಕರು ಹಾಗು ಸಾರಿಗೆ ಇಲಾಖೆ ಸಿಬ್ಬಂದಿಗಳು ಇದ್ದರು.

ಈ ಬಗ್ಗೆ ಮಾಹಿತಿ ಕೇಳಲು ತುರುವೇಕೆರೆ ಬಸ್ ಡಿಪೊ ವ್ಯವಸ್ಥಾಪಕರಿಗೆ ಕರೆ ಮಾಡಿದಾಗ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಬಸ್‌ಗಳನ್ನು ಯಾವ ಮಾರ್ಗಕ್ಕೆ ಬಿಡುತ್ತಾರೆ ಎಂಬ ಮಾಹಿತಿ ಇಲ್ಲ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು