ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿ ಜೋಡುಗಟ್ಟೆ ಸಮೀಪ ಗುರುವಾರ ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಗು ಸೇರಿದಂತೆ ಎಂಟು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ತಿಪಟೂರು ತಾಲ್ಲೂಕಿನ ಮಣಕಿಕೆರೆ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದ ಕಾರು ಹಾಗೂ ಹೊಸದುರ್ಗದಿಂದ ಮೈಸೂರಿಗೆ ಹೋಗುತ್ತಿದ್ದ ಬಸ್ ನಡುವೆ ನಡೆದ ಡಿಕ್ಕಿಯಲ್ಲಿ ಕಾರು ಭಾಗಶಃ ನಜ್ಜುಗುಜ್ಜಾಗಿದೆ.

ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಲಾವಣ್ಯಸಿಂಗ್(23), ಗೋಪಾಲ್ ಸಿಂಗ್(30), ಶಿವಕುಮಾರ್ ಸಿಂಗ್(45), ಲಕ್ಷ್ಮೀಬಾಯ್(40), ಸರಸ್ವತಿಬಾಯ್ (70), ಸಹನಾ ಬಾಯ್(50), ತುಳಸಿ ಬಾಯ್(35) ನಾಲ್ಕು ವರ್ಷದ ಸ್ನೇಹ ಗಾಯಗೊಂಡವರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ತುರುವೇಕೆರೆ ಪಿಎಸ್ಐ ಸಂಗಪ್ಪ ಮೇಟಿ, ಸಿಪಿಐ ಲೋಹಿತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಭಟನೆ: ಹಲವು ತಿಂಗಳುಗಳಿಂದ ಇದೇ ಸ್ಥಳದಲ್ಲಿ ಸರಣಿ ಅಪಘಾತಗಳಾಗುತ್ತಿದ್ದು, ಮುಂಜಾಗ್ರತೆ ಹಾಗೂ ಸುರಕ್ಷಾ ಕ್ರಮ ಅನುಸರಿಸುವಂತೆ ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜವಾಗುತ್ತಿಲ್ಲ ಎಂದು ಆರೋಪಿಸಿ ಸ್ಥಳೀಯರು, ಮಾಯಸಂದ್ರ ಗ್ರಾಮಸ್ಥರು, ಜನಪ್ರತಿನಿಧಿಗಳು, ಕನ್ನಡಪರ ಸಂಘಟನೆ ಹೋರಾಟಗಾರರು ಕೆಲ ಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.