ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಶಿರಾ | ಸಕಾಲದಲ್ಲಿ ಬಾರದ ಬಸ್‌: ವಿದ್ಯಾರ್ಥಿಗಳ ಪ್ರತಿಭಟನೆ

Published 19 ಜೂನ್ 2024, 14:02 IST
Last Updated 19 ಜೂನ್ 2024, 14:02 IST
ಅಕ್ಷರ ಗಾತ್ರ

ಶಿರಾ: ಸಕಾಲದಲ್ಲಿ ಬಸ್ ವ್ಯವಸ್ಥೆ ಇಲ್ಲದೆ ಶಾಲಾ- ಕಾಲೇಜಿಗೆ ಹೋಗಲು ತೊಂದರೆಯಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಮಂಗಳವಾರ ಕೆಎಸ್ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.

ತುಮಕೂರಿಗೆ ಶಾಲಾ ಕಾಲೇಜಿಗಾಗಿ ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದು, ಸಮಯಕ್ಕೆ ಸರಿಯಾಗಿ ಬಸ್‌ಗಳಿಲ್ಲದೆ ಪರದಾಡುವಂತಾಗಿದೆ. ಕಾಲೇಜುಗಳಿಗೆ ಹೋಗಲು ತೊಂದರೆಯಾಗುತ್ತಿದೆ. ನಿತ್ಯ ಇದೇ ರೀತಿ ತೊಂದರೆಯಾಗುತ್ತಿದೆ ಎಂದು ಪ್ರತಿಭಟನೆ ನಡೆಸಿದರು.

ನಿಲ್ದಾಣದಲ್ಲಿ 200ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರೂ ಬಸ್‌ಗಳು ಬರುತ್ತಿಲ್ಲ. ಪ್ರತಿನಿತ್ಯ ಇದೇ ರೀತಿ ತೊಂದರೆಯಾಗುತ್ತಿದೆ ಎಂದು ಪ್ರಯಾಣಿಕರು ಸಹ ಪ್ರತಿಭಟನೆ ನಡೆಸಿದರು.

ಡಿಪೊ ವ್ಯವಸ್ಥಾಪಕರು ಸ್ಥಳಕ್ಕೆ ಬಂದು ಸಮಸ್ಯೆ ಬಗೆಹರಿಸುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಪಟ್ಟು ಹಿಡಿದರು.

ಸ್ಥಳಕ್ಕೆ ಬಂದ ಡಿಪೊ ವ್ಯವಸ್ಥಾಪಕರು ಹಾಗೂ ಪೊಲೀಸರು ಮನವೊಲಿಸಿದ ನಂತರ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆಯನ್ನು ಹಿಂಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT