ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ಬಸ್ ನಿಲ್ದಾಣ: ಜನವರಿಯಲ್ಲಿ ಕಾಮಗಾರಿ ಮುಗಿಸಲು ಸೂಚನೆ

Published 21 ಡಿಸೆಂಬರ್ 2023, 16:00 IST
Last Updated 21 ಡಿಸೆಂಬರ್ 2023, 16:00 IST
ಅಕ್ಷರ ಗಾತ್ರ

ತುಮಕೂರು: ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯ ಅನುದಾನದಲ್ಲಿ ನಿರ್ಮಾಣ ಮಾಡುತ್ತಿರುವ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಕಾಮಗಾರಿಯನ್ನು ಜನವರಿ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಸೂಚಿಸಿದ್ದಾರೆ.

ಬಸ್ ನಿಲ್ದಾಣದ ಕಾಮಗಾರಿ ಸ್ಥಳಕ್ಕೆ ಗುರುವಾರ ಭೇಟಿನೀಡಿ ಪರಿಶೀಲಿಸಿದ ಅವರು, ‘ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದೆ. ಮತ್ತಷ್ಟು ಚುರುಕುಗೊಳಿಸಿ ಬೇಗ ಪೂರ್ಣಗೊಳಿಸಬೇಕು’ ಹೇಳಿದರು.

ಅಮಾನಿಕೆರೆ ಗಾಜಿನ ಮನೆ ಆವರಣದ ಸುತ್ತಮುತ್ತಲಿನ ಖಾಲಿ ಪ್ರದೇಶವನ್ನು ಅಭಿವೃದ್ಧಿಪಡಿಸುವ ಕಾಮಗಾರಿಯನ್ನು ಪರಿಶೀಲಿಸಿದರು. ಗಂಗಸಂದ್ರ ಕೆರೆಯ ಆವರಣದಲ್ಲಿ ನಡೆಯುತ್ತಿರುವ ಉದ್ಯಾನವನ ನಿರ್ಮಾಣ ಕಾಮಗಾರಿ ಸ್ಥಳಕ್ಕೂ ಭೇಟಿ ನೀಡಿದ್ದರು.

ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕಿ ಬಿ.ವಿ.ಅಶ್ವಿಜ ಜತೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT