ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ 113 ಸ್ಥಾನ ಗೆದ್ದ ಬಳಿಕ ಸಿಎಂ ಯಾರೆಂದು ತೀರ್ಮಾನಿಸಲಿ: ಭೈರತಿ ಬಸವರಾಜ

Last Updated 25 ಜೂನ್ 2021, 7:44 IST
ಅಕ್ಷರ ಗಾತ್ರ

ತುಮಕೂರು: ಕಾಂಗ್ರೆಸ್ ಪಕ್ಷದವರು ಮೊದಲು 113 ವಿಧಾನಸಭಾ ಕ್ಷೇತ್ರಗಳಲ್ಲಿ ಗೆದ್ದ ನಂತರ ಮುಖ್ಯಮಂತ್ರಿ ಯಾರಾಗಬೇಕು ಎಂದು ತೀರ್ಮಾನಿಸಲಿ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ವ್ಯಂಗ್ಯವಾಡಿದರು.

ನಗರದಲ್ಲಿ ಶುಕ್ರವಾರ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ‘ಮುಖ್ಯಮಂತ್ರಿ ಯಾರಾಗಬೇಕು ಎಂದು ಚುನಾವಣೆ ನಡೆಯುವ ಮುನ್ನವೇ ಕಾಂಗ್ರೆಸ್ ನಾಯಕರು ಕಿತ್ತಾಡುತ್ತಿದ್ದಾರೆ. ಮೊದಲು ತಮ್ಮ ಪಕ್ಷದಲ್ಲಿ ಉಂಟಾಗಿರುವ ಗೊಂದಲ ಸರಿಪಡಿಸಿಕೊಂಡು, ನಂತರ ಬಿಜೆಪಿ ಬಗ್ಗೆ ಮಾತನಾಡಲಿ’ ಎಂದರು.

ಬಿಜೆಪಿಯಲ್ಲಿ ಯಾವುದೇ ಗೊಂದಲ ಇಲ್ಲ. ಮುಖ್ಯಮಂತ್ರಿ ಬದಲಾವಣೆಯೂ ಇಲ್ಲ. ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನಕ್ಕೆ ಬೇಡಿಕೆ ಸಲ್ಲಿಸುವಿರ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿ ‘ಕೆಲವು ವಿಷಯದಲ್ಲಿ ಏರುಪೇರಾಗಿದೆ. ಸತ್ಯಾಂಶ ಹೊರಬರಲಿದೆ. ಬಳಿಕ ಸಚಿವ ಸ್ಥಾನದ ಬಗ್ಗೆ ಮಾತನಾಡಲಾಗುವುದು’ ಎಂದು ಹೇಳಿದರು.

ಸ್ಮಾರ್ಟ್ ಸಿಟಿ: ಕೋವಿಡ್ ಕಾರಣದಿಂದಾಗಿ ಸ್ಮಾರ್ಟ್ ಸಿಟಿ ಕಾಮಗಾರಿ ಸಾಕಷ್ಟು ತಡವಾಗಿದ್ದು, ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. 2023ರ ಒಳಗೆ ಸ್ಮಾರ್ಟ್ ಸಿಟಿ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಲಿವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT