ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿ ಎನ್.ನಂದಿಹಳ್ಳಿ ಗ್ರಾಮದ ಸುತ್ತಮುತ್ತ ಪಂಪ್ಸೆಟ್ಗಳ ಕೇಬಲ್ ಕಳ್ಳತನ ನಡೆಯುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ತಾಲ್ಲೂಕಿನಲ್ಲಿ ಅಡಿಕೆ ಬೆಳೆ ಹೆಚ್ಚಾಗಿರುವುದರಿಂದ ಕಾಲಕ್ಕೆ ಸರಿಯಾಗಿ ನೀರು ಹಾಯಿಸಲೇಬೇಕಿದೆ. ರಾತ್ರಿ ಕಳ್ಳರು ಕೇಬಲ್ ಕಳ್ಳತನ ಮಾಡುತ್ತಿರುವುದು ರೈತರನ್ನು ಚಿಂತೆಗೀಡು ಮಾಡಿದೆ. ರಾತ್ರಿ ತೋಟಕ್ಕೆ ಹೋಗಲು ಚಿರತೆಗಳ ಭಯ ಒಂದೆಡೆಯಾದರೆ, ಕಳ್ಳರ ಹಾವಳಿ ಮತ್ತೊಂದೆಡೆ.

ಕಳೆದ ಬೇಸಿಗೆ ಸಂದರ್ಭದಲ್ಲಿಯೂ ಗ್ರಾಮದ ಸುತ್ತಮುತ್ತ ರೈತರ ಕೃಷಿ ಪಂಪ್ಸೆಟ್ಗಳ ಕೇಬಲ್ ಕಳ್ಳತನವಾಗುತ್ತಿತ್ತು. ಆಗ ಗುಬ್ಬಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಪೊಲೀಸರು ಬಂದು ಮಹಜರು ಮಾಡಿ ಹೋಗಿದ್ದರು. ಆದರೆ ತನಿಖೆ ಏನಾಯಿತು ಎಂಬ ಮಾಹಿತಿ ಇಲ್ಲವಾಗಿದೆ ಎಂದು ರೈತರು ದೂರಿದ್ದಾರೆ.

ಪೊಲೀಸರು ಅಗತ್ಯ ಕ್ರಮ ಕೈಗೊಂಡು ರೈತರಿಗೆ ನ್ಯಾಯ ಒದಗಿಸಲು ಮುಂದಾಗಬೇಕು. ಪೊಲೀಸರು ರೈತರ ಸಹಕಾರಕ್ಕೆ ನಿಲ್ಲಬೇಕಿದೆ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರಾಜಶೇಖರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.