ಭಾನುವಾರ, ಜೂನ್ 20, 2021
20 °C

ಕೇಂದ್ರದ ವಿರುದ್ಧ ಪ್ರಚಾರಾಂದೋಲನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಜನವಿರೋಧಿ ನೀತಿ– ನಡೆಗಳ ವಿರುದ್ಧ ದೇಶವ್ಯಾಪಿ ಆ. 28ರ ವರೆಗೆ ಹಮ್ಮಿಕೊಂಡಿರುವ ಪ್ರತಿಭಟನೆ ಭಾಗವಾಗಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌‌ವಾದಿ) ನಗರದಲ್ಲಿ ಪ್ರಚಾರಾಂದೋಲನ ನಡೆಸಿತು.

ಬಿ.ಜಿ.ಪಾಳ್ಯ ವೃತ್ತ, ಗುಬ್ಬಿ ಗೇಟ್‌ನಲ್ಲಿ ಸರ್ಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ಮತ್ತು ರೈತ ವಿರೋಧಿ ನೀತಿಗಳ ಕುರಿತು ಜನರಿಗೆ ಮನವರಿಕೆ ಮಾಡಿಕೊಡಲಾಯಿತು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಎನ್.ಕೆ.ಸುಬ್ರಮಣ್ಯ ಮಾತನಾಡಿ, ‘ಬಡ ಕುಟುಂಬಗಳಿಗೆ ಮುಂದಿನ ಆರು ತಿಂಗಳವರೆಗೆ ಮಾಸಿಕ ₹7,500 ನಗದು ವರ್ಗಾವಣೆ ಮಾಡಬೇಕು. ಉಚಿತವಾಗಿ ಆಹಾರ ಧಾನ್ಯಗಳನ್ನು ವಿತರಿಸಬೇಕು’ ಎಂದು ಆಗ್ರಹಿಸಿದರು.

ಈಗಿರುವ ಕಾನೂನುಗಳನ್ನು ರದ್ದುಪಡಿಸಿ, ತಿದ್ದುಪಡಿ, ಅಮಾನತು ಮಾಡುವ ಪ್ರಸ್ತಾವ ಹಿಂತೆಗೆದುಕೊಳ್ಳಬೇಕು. ರೈಲ್ವೆ, ವಿದ್ಯುತ್, ಪೆಟ್ರೋಲಿಯಂ, ಕಲ್ಲಿದ್ದಲು, ಬ್ಯಾಂಕ್, ವಿಮೆ, ರಕ್ಷಣಾ ಉತ್ಪಾದನಾ ವಲಯಗಳಲ್ಲಿನ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣ ಮಾಡಬಾರದು ಎಂದು ಒತ್ತಾಯಿಸಿದರು.

ಸಿಪಿಎಂ ಮುಖಂಡ ಷಣ್ಮುಖಪ್ಪ, ‘ವಲಸೆ ಕೆಲಸಗಾರರ ಕಾಯ್ದೆ ತೆಗೆದುಹಾಕುವ ಪ್ರಸ್ತಾವ ರದ್ದುಮಾಡಿ ಕಾಯ್ದೆಯನ್ನು ಮತ್ತಷ್ಟು ಬಲಪಡಿಸಬೇಕು. ಪಿಎಂ ಕೇರ್ ನಿಧಿಯನ್ನು ಕೊರೊನಾ ಸೋಂಕು ಎದುರಿಸಲು ರಾಜ್ಯಗಳಿಗೆ ವರ್ಗಾಯಿಸಬೇಕು’ ಎಂದು ಒತ್ತಾಯಿಸಿದರು.

ಸಿಪಿಎಂ ನಗರ ಕಾರ್ಯದರ್ಶಿ ಎಸ್.ರಾಘವೇಂದ್ರ, ಮುಖಂಡರಾದ ಲೋಕೇಶ್, ಖಲೀಲ್, ಲಕ್ಷ್ಮಿಕಾಂತ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.