ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾಂಪಸ್ ಆಯ್ಕೆ: 5 ವಿದ್ಯಾರ್ಥಿಗಳಿಗೆ ವಾರ್ಷಿಕ ತಲಾ ₹ 29 ಲಕ್ಷ ವೇತನ

Last Updated 19 ಜುಲೈ 2019, 19:41 IST
ಅಕ್ಷರ ಗಾತ್ರ

ತುಮಕೂರು: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ (2019–20) ನಡೆದ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆಯಲ್ಲಿ ಕಾಲೇಜಿನ ವಿದ್ಯಾರ್ಥಿಗಳಾದ ಕರಣ್ ಪ್ರತಾಪ್, ಪಂಕಜ್ ಥಾಕೂರ್, ಪ್ರಥಿಕ್ ಕಡಗಿ, ಸಾಕ್ಷಿಸಿಂಗ್, ಸುಮಿತ್ ಜಾ ಅವರು ಮೊದಲ ದಿನವೇ ಪ್ರತಿಷ್ಠಿತ ಬಹುರಾಷ್ಟ್ರೀಯ ಕಂಪನಿಗೆ ಆಯ್ಕೆಯಾಗಿದ್ದಾರೆ. ಇವರಿಗೆ ವಾರ್ಷಿಕ ₹ 29 ಲಕ್ಷ ವೇತನವನ್ನು ಕಂಪನಿ ನಿಗದಿಪಡಿಸಿದೆ’ ಎಂದು ಸಿದ್ಧಗಂಗಾ ತಾಂತ್ರಿಕ ಕಾಲೇಜು (ಎಸ್‌ಐಟಿ)ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ.ಶಿವಕುಮಾರಯ್ಯ ತಿಳಿಸಿದ್ದಾರೆ.

2018–19ನೇ ಶೈಕ್ಷಣಿಕ ವರ್ಷದಲ್ಲಿ ಒಟ್ಟು 750 ಆಯ್ಕೆಗಳಾಗಿದ್ದು, ಇದರಲ್ಲಿ 65 ವಿದ್ಯಾರ್ಥಿಗಳು ₹ 10 ಲಕ್ಷಕ್ಕೂ ಹೆಚ್ಚು ವೇತನ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಆಡಳಿತ ಮಂಡಳಿ, ಕಾಲೇಜಿನ ಪ್ರಾಂಶುಪಾಲರು, ಬೋಧಕರು, ಬೋಧಕೇತರ ಸಿಬ್ಬಂದಿ ಅಭಿನಂದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT