ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | 260 ವಾಹನ ಪರವಾನಗಿ ರದ್ದು

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ವಿ.ಅಶೋಕ್‌ ಮಾಹಿತಿ
Published 15 ಮೇ 2024, 4:28 IST
Last Updated 15 ಮೇ 2024, 4:28 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಲ್ಲಿ ಒಟ್ಟು 260 ವಾಹನಗಳ ಪರವಾನಗಿ ರದ್ದುಪಡಿಸಿದ್ದು, ಅದರಲ್ಲಿ 82 ಮದ್ಯ ಸೇವಿಸಿ ವಾಹನ ಚಲಾಯಿಸಿದ ಪ್ರಕರಣಗಳಿವೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕೆ.ವಿ.ಅಶೋಕ್‌ ಮಾಹಿತಿ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜಿಲ್ಲಾ ರಸ್ತೆ ಸುರಕ್ಷಾ ಸಮಿತಿ ಸಭೆಯಲ್ಲಿ ಮಾತನಾಡಿ, ‘ಅತಿ ವೇಗ, ಚಾಲಕರ ನಿರ್ಲಕ್ಷ್ಯ, ಮದ್ಯ ಕುಡಿದು ವಾಹನ ಚಾಲನೆ ಮಾಡುತ್ತಿರುವುದರಿಂದ ಹೆಚ್ಚು ಅಪಘಾತಗಳು ಸಂಭವಿಸುತ್ತಿವೆ. ಕುಡಿದು ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಅಂತಹವರ ಪರವಾನಗಿ ರದ್ದುಪಡಿಸುವಂತೆ ಸಾರಿಗೆ ಇಲಾಖೆ ಅಧಿಕಾರಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಶುಭ ಕಲ್ಯಾಣ್‌, ‘ಲೋಕೋಪಯೋಗಿ ಇಲಾಖೆ ವ್ಯಾಪ್ತಿಗೆ ಸೇರಿದ ರಾಜ್ಯ ಹೆದ್ದಾರಿ ಮತ್ತು ಜಿಲ್ಲೆಯ ಮುಖ್ಯ ರಸ್ತೆಗಳಲ್ಲಿ 62 ಅಪಘಾತ ವಲಯ ಗುರುತಿಸಲಾಗಿದೆ. ಇಲ್ಲಿ ಎಚ್ಚರಿಕೆ, ಸೂಚನಾ ಫಲಕ ಅಳವಡಿಸಬೇಕು. ಟೆಂಪೊ, ಗೂಡ್ಸ್‌ ವಾಹನಗಳಲ್ಲಿ ಹೆಚ್ಚಿನ ಜನರನ್ನು ಸಾಗಿಸಬಾರದು. ಇಂತಹ ಪ್ರಕರಣ ಕಂಡು ಬಂದರೆ ವಾಹನ ಮಾಲೀಕ, ಚಾಲಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಬಿ.ಕರಾಳೆ, ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಉಪ ವಿಭಾಗಾಧಿಕಾರಿ ಗೌರವ್‌ಕುಮಾರ್‌ ಶೆಟ್ಟಿ, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್‌ ಹೇಮಲತಾ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT