ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

249 ಜನರಲ್ಲಿ ಕ್ಯಾನ್ಸರ್‌ ಪತ್ತೆ

2.23 ಲಕ್ಷ ಜನರ ಆರೋಗ್ಯ ತಪಾಸಣೆ
Published 13 ಜೂನ್ 2024, 3:10 IST
Last Updated 13 ಜೂನ್ 2024, 3:10 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲಾ ಪಂಚಾಯಿತಿ, ಆರೋಗ್ಯ ಇಲಾಖೆಯಿಂದ ಜಿಲ್ಲೆಯಾದ್ಯಂತ ಹಮ್ಮಿಕೊಂಡಿರುವ ಆರೋಗ್ಯ ಅಭಿಯಾನದಲ್ಲಿ ತಪಾಸಣೆಗೆ ಒಳಗಾಗಿದ್ದ 249 ಜನರಲ್ಲಿ ಕ್ಯಾನ್ಸರ್‌ ಲಕ್ಷಣಗಳು ಕಂಡು ಬಂದಿವೆ.

‘ಜಿಲ್ಲೆಯಲ್ಲಿ 30 ವರ್ಷ ಮೇಲ್ಪಟ್ಟ 2.23 ಲಕ್ಷ ಜನರನ್ನು ಆರೋಗ್ಯ ತಪಾಸಣೆಗೆ ಒಳಪಡಿಸಲಾಗಿದೆ. ಈ ವೇಳೆ 143 ಜನರಲ್ಲಿ ಬಾಯಿ ಕ್ಯಾನ್ಸರ್, 42 ಜನರಲ್ಲಿ ಸ್ತನ ಕ್ಯಾನ್ಸರ್‌, 64 ಮಂದಿಯಲ್ಲಿ ಗರ್ಭಕಂಠ ಕ್ಯಾನ್ಸರ್‌ ಇರುವುದನ್ನು ಪತ್ತೆ ಹಚ್ಚಲಾಗಿದೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಲು ಕ್ರಮ ವಹಿಸಲಾಗಿದೆ’ ಎಂ ಜಿ.ಪಂ ಸಿಇಒ ಜಿ.ಪ್ರಭು ತಿಳಿಸಿದರು.

ನಗರದ ಜಿ.ಪಂ ಕಚೇರಿಯಲ್ಲಿ ಬುಧವಾರ ಶಿಕ್ಷಣ, ಆರೋಗ್ಯ ಪ್ರಗತಿ ಕುರಿತು ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಮಾಹಿತಿ ನೀಡಿದರು.

‘ಹಸಿರು ಗ್ರಾಮ ಅಭಿಯಾನದ ಅಂಗವಾಗಿ 3.3 ಲಕ್ಷ ಸಸಿ ನೆಡುವ ಗುರಿ ಹೊಂದಲಾಗಿದೆ. ಸಸ್ಯಕ್ಷೇತ್ರಗಳಲ್ಲಿ ಸುಮಾರು 47 ಜಾತಿ 3,68,552 ಸಸಿಗಳನ್ನು ಬೆಳೆಸಲಾಗಿದೆ. ಈ ಸಸಿಗಳನ್ನು ಶಾಲಾ ಆವರಣ, ಸರ್ಕಾರಿ ಜಾಗ, ಗೋಮಾಳ, ರಸ್ತೆ ಬದಿ, ಆಸ್ಪತ್ರೆ ಆವರಣಗಳಲ್ಲಿ ನೆಟ್ಟು ಪೋಷಿಸಬೇಕು’ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT