ಶನಿವಾರ, ಡಿಸೆಂಬರ್ 5, 2020
24 °C

ಹಣ ಬಲದಿಂದ ಶಿರಾ ಗೆಲ್ಲಲು ಸಾಧ್ಯವಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆರ್‌.ಆರ್‌.ನಗರ ಮತ್ತು ಶಿರಾ ಕ್ಷೇತ್ರದ ಉಪಚುನಾವಣೆಯನ್ನು ಹಣ ಬಲದ ಮೂಲಕ ಗೆಲ್ಲಲು ಬಿಜೆಪಿ ಹೊರಟಿದೆ. ಆದರೆ, ಶಿರಾದಲ್ಲಿ ಹಣ ಬಲದಿಂದ ಗೆಲ್ಲಲು ಸಾಧ್ಯವಿಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ‘ಹಣ ಬಲದಿಂದ ಕೆ.ಆರ್‌.ಪೇಟೆಯಲ್ಲಿ ಕಮಲ ಅರಳಿಸಿದಂತೆ ಶಿರಾದಲ್ಲಿ ಕಮಲ ಅರಳಿಸಲು ಸಾಧ್ಯವಿಲ್ಲ. ಎವೆರಿ ಡೇಸ್‌ ಇಸ್ ನಾಟ್‌ ಸಂಡೇ’ ಎಂದು ಹೇಳಿದರು.

‘ನಳಿನ್‌ ಕುಮಾರ್‌ ಕಟೀಲ್‌ಗೆ ಘನತೆಯೇ ಇಲ್ಲ. ನಾನು ಮುಖ್ಯಮಂತ್ರಿ ಆಗಿದ್ದಾಗ ಹೇಗಿದ್ದೆ ಎಂಬುದು ಜನರಿಗೆ ಗೊತ್ತು. ನನ್ನಷ್ಟು ಜನಸಾಮಾನ್ಯರಿಗೆ ಸಿಗುವವರು ಯಾರೂ ಇಲ್ಲ. ನಳಿನ್ ಎಷ್ಟು ಬಡವರಿಗೆ ಸಹಾಯ ಮಾಡಿದ್ದಾರೆ’ ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು