ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರು ಪಲ್ಟಿ: ದಂಪತಿ ಸಾವು

Last Updated 19 ಸೆಪ್ಟೆಂಬರ್ 2021, 4:34 IST
ಅಕ್ಷರ ಗಾತ್ರ

ತುರುವೇಕೆರೆ: ತಾಲ್ಲೂಕಿನ ಮಾಯಸಂದ್ರ ಹೋಬಳಿಯ ಚಿಕ್ಕಪುರ ಗೇಟ್ ಬಳಿಕಾರು ಅಪಘಾತದಲ್ಲಿ ದಂಪತಿ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.

ಬೆಂಗಳೂರಿನ ಬಿ.ಎಸ್.ರವಿ (54), ಜ್ಯೋತಿ (48) ಮೃತರು. ರವಿ ಅವರು ಕುಟಂಬ ಸಮೇತ ಬೇಟೆರಾಯ ಸ್ವಾಮಿ ದೇವಸ್ಥಾನಕ್ಕೆಂದು ಬೆಂಗಳೂರಿನಿಂದ ಬರುವಾಗ ತಾಲ್ಲೂಕಿನ ಚಿಕ್ಕಪುರ ಗೇಟ್ ಬಳಿ ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ.

ಜ್ಯೋತಿ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ತೀವ್ರವಾಗಿ ಗಾಯಗೊಂಡಿದ್ದ ರವಿ ಅವರನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ರವಿ ಅವರ ಮಗ, ಕಾರು ಚಾಲಕ ವಿನಯ್‌ನ ಬಲಗೈಗೆ ಪೆಟ್ಟಾಗಿದ್ದು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT