ಹುಳಿಯಾರು (ಚಿಕ್ಕನಾಯಕನಹಳ್ಳಿ): ಆಂಧ್ರಪ್ರದೇಶ ಪ್ರವಾಸಕ್ಕೆ ಹೋಗಿದ್ದ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಂಕೆರೆ ಗ್ರಾಮದ ನವೀನ್, ಸಂತೋಷ್, ಲೋಕೇಶ್ ಭಾನುವಾರ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಸಂತೋಷ್ ಅವರ ಹುಟ್ಟು ಹಬ್ಬ ಆಚರಣೆ ಪ್ರಯುಕ್ತ 6 ಮಂದಿ ಪ್ರವಾಸಕ್ಕೆ ತೆರಳಿದ್ದರು. ಮಂತ್ರಾಲಯದ ನಂತರ ಶ್ರೀಶೈಲಕ್ಕೆ ಹೋಗುವ ವೇಳೆ ಕರ್ನೂಲ್ ಬಳಿ ಕಾರು ರಸ್ತೆ ವಿಭಜಕ್ಕೆ ಡಿಕ್ಕಿಯಾಗಿದೆ.

ತೀವ್ರವಾಗಿ ಗಾಯಗೊಂಡಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಉಳಿದವರಿಗೆ ಗಾಯಗಳಾಗಿವೆ.

ಕೆಂಕೆರೆ ನವೀನ್ ಚಿಕ್ಕನಾಯಕನಹಳ್ಳಿ ಬಿಜೆಪಿ ಮುಖಂಡ ಹಾಗೂ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಆಗಿದ್ದರು. ಸಂತೋಷ್ ತುಮಕೂರು ಬಿಜೆಪಿ ಜಿಲ್ಲಾ ಘಟಕದ ಕಾರ್ಯದರ್ಶಿ ಆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.