ಮಂಗಳವಾರ, ಮೇ 17, 2022
23 °C

ತುಮಕೂರು | ಬೈಕ್‌ಗೆ ಕಾರು ಡಿಕ್ಕಿ: ಜಿ.ಪಂ. ಮಾಜಿ ಉಪಾಧ್ಯಕ್ಷ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಗುಬ್ಬಿ: ಪಟ್ಟಣಕ್ಕೆ ಸಮೀಪದ ಕಬ್ಬಿಣದಸೇತುವೆ ಪಾಳ್ಯದ ಬಳಿ ಭಾನುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕೆ.ಸಿ. ಕೃಷ್ಣಮೂರ್ತಿ (65) ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಮೃತಪಟ್ಟಿದ್ದಾರೆ.

ಕಡೆಪಾಳ್ಯ ಗ್ರಾಮದವರಾದ ಕೃಷ್ಣಮೂರ್ತಿ ಅವರ ಬೈಕ್‌ಗೆ ಕಾರೊಂದು ಡಿಕ್ಕಿ ಹೊಡೆದಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. 

ಮೃತರಿಗೆ ಪತ್ನಿ ಹಾಗೂ ಪುತ್ರ ಇದ್ದಾರೆ.

ಮೃತರು ಅಗ್ನಿವಂಶ ಕ್ಷತ್ರಿಯ ವಿದ್ಯಾವರ್ಧಕ ಸಂಘ, ಎವಿಕೆ ಸಮುದಾಯ ಭವನದ ಅಧ್ಯಕ್ಷ ಹಾಗೂ ಮಲ್ಲಸಂದ್ರದ ಮಹಾಲಕ್ಷ್ಮಿ ದೇವಸ್ಥಾನದ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ರೈತ ಸಂಘದ ಸಂಘಟನೆಯಲ್ಲೂ ತೊಡಗಿಸಿಕೊಂಡಿದ್ದರು. 

ಅಂತ್ಯಕ್ರಿಯೆಯು ಮೃತರ ಸ್ವಗ್ರಾಮದಲ್ಲಿ ನೆರವೇರಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು