ಕುಣಿಗಲ್: ರಾಷ್ಟ್ರೀಯ ಹೆದ್ದಾರಿ 75ರ ಗೊಟ್ಟಿಕೆರೆ ಬಳಿ ಭಾನುವಾರ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಗಳೂರು ನಿವಾಸಿ ಚೇತನ್ (29) ಎಂಬುವರು ಮೃತಪಟ್ಟಿದ್ದಾರೆ.
ಕೊಡಗು ಜಿಲ್ಲೆಯ ಗೋಪಾಲಪುರದವರಾದ ಚೇತನ್ ಬೆಂಗಳೂರಿನಲ್ಲಿ ನೆಲೆಸಿದ್ದರು. ಕೊಡಗಿನಿಂದ ಬೆಂಗಳೂರಿಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದೆ. ಪತ್ನಿ ಜಯಂತಿ ಮತ್ತು ಪುತ್ರ ವಿಹಾನ್ ತೀವ್ರವಾಗಿ ಗಾಯಗೊಂಡಿದ್ದಾರೆ. ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.