ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಳ್ಳು ದಾಖಲೆ ನೀಡಿ ಜಾತಿ ಪ್ರಮಾಣ ಪತ್ರ; ಪ್ರಕರಣ ದಾಖಲು

Last Updated 22 ಮೇ 2019, 15:38 IST
ಅಕ್ಷರ ಗಾತ್ರ

ತುಮಕೂರು: ನಗರದ ಎನ್.ಆರ್. ಕಾಲೋನಿ ನಿವಾಸಿ ರಾಘವೇಂದ್ರ ಅವರು ಸುಳ್ಳು ದಾಖಲೆ ನೀಡಿ ಪರಿಶಿಷ್ಟ ಜಾತಿಯ ಆದಿ ಕರ್ನಾಟಕ ಪ್ರಮಾಣ ಪತ್ರವನ್ನು ಪಡೆದು ಪರಿಶಿಷ್ಟ ಜಾತಿಯ ಜನಾಂಗದವರಿಗೆ ಮತ್ತು ಸರ್ಕಾರಕ್ಕೆ ವಂಚನೆ ಮಾಡಿರುವ ಬಗ್ಗೆ ನಗರದ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ತುಮಕೂರು ಘಟಕದ ಇನ್‌ಸ್ಪೆಕ್ಟರ್ ಎ.ವೆಂಕಟರಮಣಯ್ಯ ಅವರು ದೂರು ಸಲ್ಲಿಸಿದ್ದಾರೆ.

ರಾಘವೇಂದ್ರ ಅವರು ಮೂತಃ ಶೆಟ್ಟಿ ಬಣಜಿಗ ಜಾತಿಗೆ ಸೇರಿದ್ದಾರೆ. ಅವರ ಮೂಲ ದಾಖಲಾತಿಗಳನ್ನು ಮರೆಮಾಚಿ ತುಮಕೂರು ತಾಲ್ಲೂಕು ಕಚೇರಿಗೆ ಸುಳ್ಳು ದಾಖಲೆ ನೀಡಿ 2007ರ ಸೆಪ್ಟೆಂಬರ್ 24ರಂದು ಮತ್ತು 2015ರ ಡಿಸೆಂಬರ್ 31ರಂದು ಪರಿಶಿಷ್ಟ ಜಾತಿಯ ಆದಿ ಕರ್ನಾಟಕ ಪ್ರಮಾಣ ಪತ್ರ ಪಡೆದಿದ್ದು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ವಿಚಾರಣೆ ವೇಳೆ ದೃಢಪಟ್ಟಿದೆ ಎಂದು ದೂರಿನಲ್ಲಿ ವೆಂಕಟರಮಣಯ್ಯ ತಿಳಿಸಿದ್ದಾರೆ.

ರಾಘವೇಂದ್ರ ವಿರುದ್ಧ ಕಾನೂನು ಕ್ರಮ ಕೈಗೊಂಡು ಮೂಲ ಕಡತವನ್ನು ತನಿಖೆಗಾಗಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ತುಮಕೂರು ಘಟಕಕ್ಕೆ ವರ್ಗಾವಣೆ ಮಾಡಬೇಕು ಎಂದು ನಗರ ಠಾಣೆ ಪೊಲೀಸರಿಗೆ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT