ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು | ದನದ ಕೊಟ್ಟಿಗೆಗೆ ಬೆಂಕಿ: ಅಪಾರ ಪ್ರಮಾಣದ ನಷ್ಟ

Published 14 ಜನವರಿ 2024, 14:29 IST
Last Updated 14 ಜನವರಿ 2024, 14:29 IST
ಅಕ್ಷರ ಗಾತ್ರ

ತುಮಕೂರು: ತಾಲ್ಲೂಕಿನ ಹೆಬ್ಬೂರು ಹೋಬಳಿಯ ಕಾರನಹಳ್ಳಿ ಬಳಿ ಭಾನುವಾರ ಬೆಳಗಿನ ಜಾವ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು, ಅಪಾರ ಪ್ರಮಾಣದ ನಷ್ಟವಾಗಿದೆ.

ಚಿಕ್ಕಣ್ಣ ಎಂಬುವರಿಗೆ ಸೇರಿದೆ ದನದ ಕೊಟ್ಟಿಗೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. 10 ಕುರಿ, 10 ಕೋಳಿ, 5 ಹಸು, 1 ಎಮ್ಮೆ, 10 ಕ್ವಿಂಟಲ್ ಅಡಿಕೆ, ಒಂದು ಟ್ರ್ಯಾಕ್ಟರ್‌ ಬೆಂಕಿಗಾಹುತಿಯಾಗಿದೆ. ಚಿಕ್ಕಣ್ಣ ಅವರ ಮನೆಯಿಂದ ಸ್ವಲ್ಪ ದೂರದಲ್ಲಿ ಕೊಟ್ಟಿಗೆ ನಿರ್ಮಿಸಲಾಗಿತ್ತು. ಬೆಂಕಿ ಕಾಣಿಸಿಕೊಂಡ ವಿಷಯ ತಿಳಿದ ಕೂಡಲೇ ಪೊಲೀಸರು, ಅಗ್ನಿ ಅಗ್ನಿ ಶಾಮಕದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT