ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಮಿಳುನಾಡಿಗೆ ನೀರು ಹರಿಸಲು ವಿರೋಧ

ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ
Published 16 ಸೆಪ್ಟೆಂಬರ್ 2023, 4:24 IST
Last Updated 16 ಸೆಪ್ಟೆಂಬರ್ 2023, 4:24 IST
ಅಕ್ಷರ ಗಾತ್ರ

ತುಮಕೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಯಿತು.

ರಾಜ್ಯದ ಜನರಿಗೆ ಕುಡಿಯಲು ನೀರಿಲ್ಲ. ಬರ ಕಾಡುತ್ತಿದೆ. ಇಂತಹ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸಬಾರದು. ನೀರು ಬಿಟ್ಟರೆ ರೈತರಿಗೆ ಅನ್ಯಾಯ ಮಾಡಿದಂತಾಗುತ್ತದೆ. ಜನಪ್ರತಿನಿಧಿಗಳು ಇತ್ತ ಗಮನ ಹರಿಸಬೇಕು. ಯಾವುದೇ ಕಾರಣಕ್ಕೂ ನೀರು ಬಿಡಬಾರದು ಎಂದು ಮಹಿಳಾ ಘಟಕದ ಅಧ್ಯಕ್ಷೆ ಸುನಿತಾ ಮೂರ್ತಿ ಒತ್ತಾಯಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್‌ ಗೌಡ, ‘ನೀರು ಹರಿಸಿದರೆ ರಾಜ್ಯ ಸರ್ಕಾರದ ವಿರುದ್ಧ ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು. ಸರ್ಕಾರ ರೈತರ ಬಗ್ಗೆ ಕಾಳಜಿ ವಹಿಸಬೇಕು. ಕುಡಿಯುವ ನೀರಿಗೆ ಹೆಚ್ಚಿನ ಒತ್ತು ನೀಡಬೇಕು’ ಎಂದು ಆಗ್ರಹಿಸಿದರು.

ರಕ್ಷಣಾ ವೇದಿಕೆ ಪದಾಧಿಕಾರಿಗಳಾದ ಆರ್‌.ವಿ.ರಾಧಾ, ಕುಮಾರ್‌, ಕುಂಬಯ್ಯ, ಕಾಂತರಾಜು, ರಾಧ ಎಲ್.ಗೌಡ, ಹೊನ್ನಾಂಬಿಕೆ, ಉಮಾ, ಮಂಗಳಗೌರಮ್ಮ, ಶಕುಂತಲಾ, ರೇಖಾ, ರೂಪಾ, ಸುಜಾತಾ, ಲತಾಮಣಿ, ಟಿ.ಸುಜಾತಾ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT