ಸೋಮವಾರ, 24 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿಶ್ವ ಹಾಲು ದಿನ ಚರಣೆ: ನಿತ್ಯ 9 ಲಕ್ಷ ಲೀಟರ್‌ ಶೇಖರಣೆ

Published 2 ಜೂನ್ 2024, 6:07 IST
Last Updated 2 ಜೂನ್ 2024, 6:07 IST
ಅಕ್ಷರ ಗಾತ್ರ

ತುಮಕೂರು: ತುಮಕೂರು ಹಾಲು ಒಕ್ಕೂಟದಿಂದ ಪ್ರತಿ ನಿತ್ಯ 9.01 ಲಕ್ಷ ಲೀಟರ್‌ ಹಾಲು ಶೇಖರಣೆಯಾಗುತ್ತಿದೆ. ಜಿಲ್ಲೆಯಲ್ಲಿ 1,345 ಸಹಕಾರ ಸಂಘಗಳು ಅಸ್ತಿತ್ವದಲ್ಲಿವೆ ಎಂದು ತುಮುಲ್ ಆಡಳಿತಾಧಿಕಾರಿ ಜಿ.ಉಮೇಶ್‌ ತಿಳಿಸಿದರು.

ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಶನಿವಾರ ವಿಶ್ವ ಹಾಲು ದಿನ ಆಚರಣೆ ಪ್ರಯುಕ್ತ ಹಾಲು ಉತ್ಪಾದಕರ ಒಕ್ಕೂಟದಿಂದ ರೋಗಿಗಳಿಗೆ ಹಾಲು, ಬಿಸ್ಕೆಟ್, ಹಣ್ಣು ವಿತರಿಸಿ ಮಾತನಾಡಿದರು.

‘ಹಾಲಿನ ಮಹತ್ವ ತಿಳಿಸುವ ಉದ್ದೇಶದಿಂದ ಈ ದಿನ ಆಚರಿಸಲಾಗುತ್ತದೆ. ಹಾಲಿನ ಉದ್ಯಮ ಮತ್ತು ವ್ಯವಸ್ಥೆಯನ್ನು ಮತ್ತಷ್ಟು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಈ ಕಾರ್ಯ ಮಾಡಲಾಗುತ್ತಿದೆ. ಜನರಲ್ಲಿ ಹಾಲಿನ ಮಹತ್ವದ ಬಗ್ಗೆ ಅರಿವು ಮೂಡಿಸುವ ಕೆಲಸವಾಗುತ್ತದೆ’ ಎಂದು ಹೇಳಿದರು.

ತುಮುಲ್ ವ್ಯವಸ್ಥಾಪಕ ನಿರ್ದೇಶಕ ಜಿ.ಶ್ರೀನಿವಾಸನ್, ‘ಪೌಷ್ಟಿಕಾಂಶ ಕೊರತೆ ಎದುರಿಸುತ್ತಿರುವ ರೋಗಿಗಳಿಗೆ ಹಾಲು ವಿತರಣೆಯಿಂದ ಅನುಕೂಲವಾಗುತ್ತದೆ. ತುಮುಲ್‍ನಿಂದ 6.50 ಲಕ್ಷ ಲೀಟರ್ ಹಾಲು ಮಾರಾಟವಾಗುತ್ತಿದೆ. ನಮ್ಮ ಒಕ್ಕೂಟದ ಹಾಲು ಶಾಲಾ ಮಕ್ಕಳಿಗೆ ನೀಡುವ ಕ್ಷೀರ ಭಾಗ್ಯ ಯೋಜನೆಗೂ ಬಳಕೆಯಾಗುತ್ತಿದೆ’ ಎಂದು ತಿಳಿಸಿದರು.

ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಅಸ್ಗರ್ ಬೇಗ್‌, ತುಮುಲ್‌ನ ಪ್ರಧಾನ ವ್ಯವಸ್ಥಾಪಕ ತಿಮ್ಮನಾಯಕ್, ಮಾರುಕಟ್ಟೆ ವಿಭಾಗದ ವ್ಯವಸ್ಥಾಪಕರಾದ ವಿದ್ಯಾನಂದ್, ಗಿರೀಶ್ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT