ಕೇಂದ್ರದಲ್ಲಿ ಇರುವುದು ಮೋದಿ ಪಕ್ಷ

ಗುರುವಾರ , ಏಪ್ರಿಲ್ 25, 2019
21 °C
ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಜಿಲ್ಲಾ ಉಸ್ತುವಾರಿಶೇಷಾದ್ರಿ ಹೇಳಿಕೆ

ಕೇಂದ್ರದಲ್ಲಿ ಇರುವುದು ಮೋದಿ ಪಕ್ಷ

Published:
Updated:
Prajavani

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರ ಸರ್ವಾಧಿಕಾರ ಧೋರಣೆಯಿಂದ ಕೇಂದ್ರದಲ್ಲಿ ಇಂದು ಬಿಜೆಪಿ ಪಕ್ಷವಿಲ್ಲ. ಇರುವುದು ಮೋದಿ ಪಕ್ಷ ಮಾತ್ರ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ (ಸಿಪಿಐ) ಜಿಲ್ಲಾ ಉಸ್ತುವಾರಿ ಶೇಷಾದ್ರಿ ಆರೋಪಿಸಿದರು.

ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸುಳ್ಳು ಭರವಸೆಗಳನ್ನು ನೀಡುತ್ತ ಬಡವ ಮತ್ತು ಕಾರ್ಮಿಕ ವರ್ಗದವರನ್ನು ಮೋಸ ಮಾಡಿದ್ದಾರೆ. ಜೊತೆಗೆ ಇವರ ಸರ್ವಾಧಿಕಾಿ ಧೋರಣೆಯಿಂದ ವಿವಿಧ ಪಕ್ಷಗಳು ಬಿಜೆಪಿಯೊಂದಿಗಿನ ಮೈತ್ರಿಯನ್ನು ತ್ಯಜಿಸಿದ್ದಾರೆ’ ಎಂದು ಹೇಳಿದರು.

ಈ ನಿಟ್ಟಿನಲ್ಲಿ ಕಾರ್ಮಿಕರ ಪರವಾಗಿ ಸಿಪಿಐನಿಂದ ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಎನ್‌.ಶಿವಣ್ಣ ಅವರು ಸ್ಪರ್ಧಿಸಿದ್ದಾರೆ. ಅವರಿಗೆ ಬೆಂಬಲಿಸಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಸಿಪಿಐ ಪಕ್ಷದ ಬಿ.ಉಮೇಶ್ ಮಾತನಾಡಿ, ‘ಇಂದು ಎಡಪಕ್ಷಗಳು ಮುಂದಾಲೋಚನೆ ಮಾಡಿದ್ದರಿಂದ ಸೂಕ್ತ ಅಭ್ಯರ್ಥಿಗೆ ಬೆಂಬಲ ನೀಡಬೇಕು ಎಂಬ ಭಾವನೆ ಮತದಾರರಲ್ಲಿ ಬಂದಿದೆ. ಈ ನಿಟ್ಟಿನಲ್ಲಿ ಅತ್ಯಧಿಕ ಮತಗಳಿಂದ ಶಿವಣ್ಣ ಅವರು ಗೆಲ್ಲಲಿದ್ದಾರೆ’ ಎಂದು ಹೇಳಿದರು.

ಸಿಪಿಐನ ಜಿಲ್ಲಾ ಕಾರ್ಯದರ್ಶಿ ಗಿರೀಶ್ ಮಾತನಾಡಿ, ‘ಅಭ್ಯರ್ಥಿ ಪರವಾಗಿ ಈಗಾಗಲೇ ವಿವಿಧ ತಾಲ್ಲೂಕುಗಳಲ್ಲಿ ಪ್ರಚಾರ ಕಾರ್ಯ ಮುಕ್ತಾಯಗೊಂಡಿದೆ. ಉಳಿದ ತಾಲ್ಲೂಕುಗಳಲ್ಲಿಯೂ ಪ್ರಚಾರಕ್ಕೆ ವ್ಯವಸ್ಥೆ ಮಾಡಲಾಗುವುದು’ ಎಂದರು.

ಸಿಪಿಐನ ರಾಜ್ಯ ಕಾರ್ಯದರ್ಶಿ ಕೆ.ಎಸ್.ಜನಾರ್ದನ್, ರಾಜ್ಯ ಸಮಿತಿ ಸದಸ್ಯ ರಾಮಕೃಷ್ಣ, ಸಿಪಿಐ ಜಿಲ್ಲಾ ಖಜಾಂಚಿ ಕಂಬೇಗೌಡ, ಅಶ್ವತ್ಥನಾರಾಯಣ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !