ತುಮಕೂರು: ಖಾಸಗಿ ಶಾಲಾ ವಾಹನಗಳಲ್ಲಿ ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಕೊಂಡೊಯ್ಯುವುದು ಸೇರಿದಂತೆ ಇತರೆ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ತಿಳಿಸಲು ಅನುಕೂಲವಾಗುವಂತೆ ಡಿಡಿಪಿಐ ಕಚೇರಿಯಲ್ಲಿ ಸಹಾಯವಾಣಿ ಸ್ಥಾಪಿಸಬೇಕೆಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‍ಕುಮಾರ್ ಅವರು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಳ್ಳಲಾಗಿದ್ದ ‘ಶಾಲಾ ವಾಹನಗಳಲ್ಲಿ ಮಕ್ಕಳ ಸುರಕ್ಷತೆ’ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರಕು ವಾಹನಗಳಲ್ಲಿ ಮಕ್ಕಳನ್ನು ಶಾಲೆಗೆ ಕರೆದೊಯ್ಯುವುದು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಆದರೂ ಗ್ರಾಮೀಣ ಭಾಗಗಳಲ್ಲಿ ಇದನ್ನು ಕಾಣುತ್ತಿದ್ದೇವೆ. ಅಲ್ಲದೆ, ಒಂದೇ ವಾಹನದಲ್ಲಿ ಹೆಚ್ಚು ಸಂಖ್ಯೆಯ ಮಕ್ಕಳನ್ನು ಕರೆದೊಯ್ಯವಂತಹ ಚಟುವಟಿಕೆಗಳು ಕಂಡು ಬಂದಲ್ಲಿ ಈ ದೂರುಗಳನ್ನು ದಾಖಲಿಸಿಕೊಳ್ಳಲು ಸಹಾಯವಾಣಿ ಸ್ಥಾಪಿಸಬೇಕು ಎಂದರು.

ಸಾರ್ವಜನಿಕರಿಂದ ಬರುವ ದೂರುಗಳನ್ನು ಪರಿಶೀಲಿಸಿ ಸಂಬಂಧಪಟ್ಟ ಶಾಲೆಯ ಹಾಗೂ ವಾಹನಗಳ ವಿರುದ್ಧ ಅಗತ್ಯ ಕ್ರಮ ವಹಿಸಬೇಕು ಹಾಗೂ ಈ ಕುರಿತಂತೆ ಜಾಗೃತಿ ಮೂಡಿಸಲು ಆಟೊ ಚಾಲಕರ ಸಂಘ, ಸರಕು ವಾಹನಗಳ ಚಾಲಕರ ಸಂಘ ಹಾಗೂ ಖಾಸಗಿ ಶಾಲೆಯವರನ್ನು ಆಗಿಂದಾಗ್ಗೆ ಸಭೆ ಕರೆದು ತಿಳುವಳಿಕೆ ನೀಡಬೇಕು ಎಂದು ಬಿಇಒಗಳಿಗೆ ಸೂಚನೆ ನೀಡಿದರು.

ಶಿಕ್ಷಣ ಸಂಸ್ಥೆಗಳೆಂದರೆ ಲಾಭದಾಯಕವಾಗಿ ನಡೆಸುವುದಲ್ಲ. ಜಿಲ್ಲೆಯಲ್ಲಿರುವ 251 ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚು ದಾಖಲಾತಿ ಇರುವ ಶಾಲೆಗಳಲ್ಲಿ ಶುಲ್ಕ ಹಾಗೂ ವಿವಿಧ ಮೂಲ ಸೌಕರ್ಯಗಳಾದ ನೀರು, ಶೌಚಾಲಯ, ಆರೋಗ್ಯ ತಪಾಸಣೆ, ವಿಪತ್ತು ನಿರ್ವಹಣೆ, ಸಿಸಿ ಕ್ಯಾಮೆರಾ ಅಳವಡಿಕೆ ಕುರಿತಂತೆ ವಿವರವಾದ ಆಡಿಟ್ ಮಾಡಿಸಿ ವರದಿ ನೀಡಬೇಕು ಎಂದು ತಿಳಿಸಿದರು.

ಖಾಸಗಿ ಶಾಲೆಗಳಲ್ಲಿ ಮಕ್ಕಳಿಗೆ ಸಾಮೂಹಿಕವಾಗಿ ನೀಡುವ ತಿಂಡಿ ತಿನಿಸು ಅಥವಾ ಊಟವನ್ನು ಪ್ರಾಂಶುಪಾಲರು ಅಥವಾ ಶಿಕ್ಷಕರು ಮೊದಲು ಸೇವಿಸಿ ಪರಿಶೀಲಿಸಿ ಸಮಸ್ಯೆ ಇಲ್ಲವೆಂದು ದೃಢೀಕರಿಸಿದ ನಂತರ ಮಕ್ಕಳಿಗೆ ನೀಡಬೇಕು. ಹಾಗೆಯೇ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ನೀಡುವ ಊಟವನ್ನು ರುಚಿ ಮತ್ತು ಶುಚಿ ಪರಿಶೀಲಿಸಿ ನೀಡಬೇಕೆಂಬ ಸುತ್ತೊಲೆಯ ಕುರಿತು ಮುಖ್ಯ ಶಿಕ್ಷಕರ ಗಮನಕ್ಕೆ ತರಬೇಕು ಎಂದು ಹೇಳಿದರು.

ಸಭೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರಂಗಧಾಮಪ್ಪ, ಅಶ್ವಥನಾರಾಯಣ, ಪ್ರಭುಸ್ವಾಮಿ, ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಬಿಇಒಗಳು, ಪ್ರಾದೇಶಿಕ ಸಾರಿಗೆ ಕಚೇರಿಯ ಅಧೀಕ್ಷಕ ದೇವರಾಜು, ನೋಡಲ್ ಅಧಿಕಾರಿಗಳು, ಶಿಕ್ಷಣ ಇಲಾಖೆಯ ಪದಾಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.