ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಗಡಿ: ಫೆ.29ರಿಂದ ಚಾಮುಂಡೇಶ್ವರಿ ದೇಗುಲದ ವಾರ್ಷಿಕೋತ್ಸವ

Published 27 ಫೆಬ್ರುವರಿ 2024, 13:44 IST
Last Updated 27 ಫೆಬ್ರುವರಿ 2024, 13:44 IST
ಅಕ್ಷರ ಗಾತ್ರ

ಮಾಗಡಿ: ತಾಲ್ಲೂಕಿನ ಚಿಕ್ಕತೊರೆ ಪಾಳ್ಯದ ಚಾಮುಂಡೇಶ್ವರಿ ದೇವಾಲಯದ 5ನೇ ವಾರ್ಷಿಕೋತ್ಸವ ಹಾಗೂ ಸೇವಾಲಾಲ್‌ ಜಯಂತಿ ಫೆ.29ರಿಂದ ಮಾ.1ರವರೆಗೆ ನಡೆಯಲಿದೆ ಎಂದು ಚಾಮುಂಡೇಶ್ವರಿ ಮತ್ತು ಮುನೇಶ್ವರಸ್ವಾಮಿ ದೇವಾಲಯ ಸೇವಾ ಸಮಿತಿ ಟ್ರಸ್ಟ್‌ನ ಪ್ರಕಟಣೆ ತಿಳಿಸಿದೆ.

ಬಾಚೇನಹಟ್ಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಾಂತಿಬಾಯಿ ಧನಂಜಯ ನಾಯ್ಕ್‌ ಫೆ.29ರಂದು ಬೆಳಿಗ್ಗೆ 9ಕ್ಕೆ ಗಂಗಾ‍ಪೂಜೆಯೊಂದಿಗೆ ವಾರ್ಷಿಕೋತ್ಸವ ಹಾಗೂ ಸೇವಾಲಾಲ್‌ ಜಯಂತಿಗೆ ಚಾಲನೆ ನೀಡಲಿದ್ದಾರೆ. ಲೋಕ ಕಲ್ಯಾಣಾರ್ಥವಾಗಿ ಚಂಡಿಕಾ ಹೋಮ ನಡೆಯಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಸೇವಾಲಾಲ್‌ ಜಯಂತಿ ಆಯೋಜಿಸಲಾಗಿದೆ ಎಂದು ದೇವಾಲಯ ಟ್ರಸ್ಟ್‌ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT