ಬುಧವಾರ, 21 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಚಂದ್ರಶೇಖರ್‌ಗೆ ಬಿಜೆಪಿ ವಕ್ತಾರ ಸ್ಥಾನ

Published 5 ಜನವರಿ 2024, 15:40 IST
Last Updated 5 ಜನವರಿ 2024, 15:40 IST
ಅಕ್ಷರ ಗಾತ್ರ

ತುಮಕೂರು: ಜಿಲ್ಲೆಯಲ್ಲಿ ಪಕ್ಷದ ವಿವಿಧ ಹುದ್ದೆಗಳನ್ನು ನಿರ್ವಹಿಸುತ್ತಿದ್ದ ಎಚ್.ಎನ್.ಚಂದ್ರಶೇಖರ್ ಅವರನ್ನು ಬಿಜೆಪಿ ರಾಜ್ಯ ವಕ್ತಾರರನ್ನಾಗಿ ನೇಮಕ ಮಾಡಲಾಗಿದೆ. ಜಿಲ್ಲೆಯ ನಾಯಕರೊಬ್ಬರಿಗೆ ಇದೇ ಮೊದಲ ಬಾರಿಗೆ ವಕ್ತಾರನ ಸ್ಥಾನ ಲಭ್ಯವಾಗಿದೆ.

ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿಯಾಗಿ, ಜಿಲ್ಲಾ ಘಟಕದ ಕಾರ್ಯದರ್ಶಿ, ಉಪಾಧ್ಯಕ್ಷರಾಗಿ, ಪಕ್ಷದ ಮಾಧ್ಯಮ ಪ್ರಮುಖ, ಸಂಚಾಲಕ ಹಾಗೂ ಬಜರಂಗದಳ ಜಿಲ್ಲಾ ಸಂಚಾಲಕರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಮಾಧ್ಯಮ ಚರ್ಚೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಪಕ್ಷ ಹಾಗೂ ಪಕ್ಷದ ಕಾರ್ಯಕ್ರಮಗಳನ್ನು ಸಮರ್ಥಿಸಿಕೊಂಡು ಗಮನ ಸೆಳೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT