ಚೇಳೂರು: ಎಡಗೈ ಸಮುದಾಯದ ದಶಕಗಳ ಬೇಡಿಕೆಯಾದ ಒಳಮೀಸಲಾತಿಯನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು ಕದಸಂಸ ಜಿಲ್ಲಾ ಸಂಚಾಲಕ ಕಡ್ಡಿಲು ವೆಂಕಟರವಣಪ್ಪ ಆಗ್ರಹಿಸಿದರು.

ಪಟ್ಟಣದಲ್ಲಿ ಗುರುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳಮೀಸಲಾತಿ ಜಾರಿಯಾಗದ ಕಾರಣ ಅರ್ಹ ಸಮುದಾಯಗಳಿಗೆ ಅನ್ಯಾಯವಾಗುತ್ತಿದೆ. ಸರ್ಕಾರವು ಈ ಕೂಡಲೇ ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಮುಂದಾಗಬೇಕು. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಈ ಬಗ್ಗೆ ನಿರ್ಲಕ್ಷ್ಯವಹಿಸಿದರೆ ಮುಂದಿನ ದಿನಗಳಲ್ಲಿ ತೀವ್ರ ಸ್ವರೂಪದ ಹೋರಾಟ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ದಸಂಸ ತಾಲ್ಲೂಕು ಸಂಚಾಲಕ ಜಿ. ನರಸಿಂಹಪ್ಪ ಮಾತನಾಡಿ, ಒಳಮೀಸಲಾತಿ ನಮ್ಮ ಸಾಂವಿಧಾನಿಕ ಹಕ್ಕು. ಇದನ್ನು ಪಡೆಯಲು ಸಿದ್ಧರಿದ್ದೇವೆ. ಸಂಘಟನೆಯು ಈ ಹೋರಾಟವನ್ನು ಪ್ರತಿ ಹಳ್ಳಿಗೂ ಕೊಂಡೊಯ್ಯಲಿದೆ. ಮುಂಬರುವ ದಿನಗಳಲ್ಲಿ ತಾಲ್ಲೂಕು ಕೇಂದ್ರದಲ್ಲಿ ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.

ಮಾದರ ಮಹಾಸಭಾ ತಾಲ್ಲೂಕು ಉಪಾಧ್ಯಕ್ಷ ಊದುವಾರಪಲ್ಲಿ ಬಾಬು, ಒಳಮೀಸಲಾತಿ ಜಾರಿ ಆಗದಿದ್ದರೆ ತಳಮಟ್ಟದ ಕುಟುಂಬಗಳಿಗೆ ಅನ್ಯಾಯವಾಗಲಿದೆ. ಸರ್ಕಾರ ಕೂಡಲೇ ಇದನ್ನು ಜಾರಿಗೆ ತಂದು ಎಲ್ಲ ಉಪಜಾತಿಗಳಿಗೂ ಸಮಾನ ನ್ಯಾಯ ಒದಗಿಸಬೇಕು ಎಂದು ಹೇಳಿದರು.

ಮುಖಂಡರಾದ ಪಿ. ಮಂಜುನಾಥ, ತುಳವಣೂರು ವೆಂಕಟರವಣಪ್ಪ, ಅಜರುದ್ದೀನ್, ರಾಮಚಂದ್ರ, ಪೋಸ್ಟ್ ನರಸಿಂಹ, ದುಗಿನಾಯಕನಹಳ್ಳಿ ನಾಗೇಶ್, ನರಸಿಂಹಪ್ಪ ಮತ್ತಿತರರು ಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-16-920641995

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.