ದಕ್ಷಿಣ ಭಾರತದಲ್ಲಿಯೇ ದೊಡ್ಡ ಹಲಸಿನ ಮಾರುಕಟ್ಟೆ ಎಂಬ ಹೆಗ್ಗಳಿಕೆಗೆ ಪಾತ್ರವಾದ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಚೇಳೂರು ಮಾರುಕಟ್ಟೆಯಲ್ಲಿ ಈ ವರ್ಷದ ಹಲಸಿನ ವಹಿವಾಟು ಜೋರಾಗಿದೆ. ರಾಜ್ಯದಲ್ಲಿಯೇ ತುಮಕೂರಿನಲ್ಲಿ ಅತಿ ಹೆಚ್ಚು ಹಲಸಿನ ಮರಗಳಿದ್ದು, ಹಲಸಿನ ಹಣ್ಣು ಉತ್ಪಾದನೆಯಲ್ಲಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಹಲಸಿನ ಹಣ್ಣಿನಲ್ಲೇ ಉತ್ಕೃಷ್ಟ ಎಂದು ಗುರುತಿಸಿರುವ ತುಮಕೂರು ಜಿಲ್ಲೆಯ ಹೆಮ್ಮೆಯ ತಳಿಗಳಾದ ‘ಸಿದ್ದು’ ಹಾಗೂ ‘ಶಂಕರ’ ಹಣ್ಣಿಗೆ ಈಗಾಗಲೇ ಪೇಟೆಂಟ್ ಸಿಕ್ಕಿದೆ. ಈ ಎರಡೂ ಹಲಸಿನ ತಳಿಗಳು ರುಚಿ ಮತ್ತು ಆರೋಗ್ಯ ದೃಷ್ಟಿಯಿಂದ ಹೆಚ್ಚಿನ ಮಹತ್ವ ಪಡೆದುಕೊಂಡಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.