ಚೇಳೂರು: ತಾಲ್ಲೂಕಿನಾದ್ಯಂತ ಗ್ರಾಮೀಣ ಭಾಗದ ಬಡವರು, ಕೃಷಿ ಕೂಲಿ ಕಾರ್ಮಿಕರು ಮತ್ತು ರೈತರು ಎದುರಿಸುತ್ತಿರುವ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಒತ್ತಾಯಿಸಿ ಶುಕ್ರವಾರ 12 ಗ್ರಾಮ ಪಂಚಾಯಿತಿಗಳಲ್ಲಿ ಏಕಕಾಲದಲ್ಲಿ ಪ್ರತಿಭಟನೆ ನಡೆಸಲಾಯಿತು.

ಅಲ್ಲದೆ, ಬೃಹತ್ ಜಾಗೃತಿ ಅಭಿಯಾನ ಮತ್ತು ಹಕ್ಕೊತ್ತಾಯ ಮನವಿಗಳನ್ನು ಸಲ್ಲಿಸಲಾಯಿತು.

ಕರ್ನಾಟಕ ಕೃಷಿ ಕೂಲಿಕಾರರು ಮತ್ತು ಗ್ರಾಮೀಣ ಕಾರ್ಮಿಕರ ಸಂಘ, ಸಿಐಟಿಯು ಹಾಗೂ ಕರ್ನಾಟಕ ಪ್ರಾಂತ ರೈತ ಸಂಘದ ಜಂಟಿ ಆಶ್ರಯದಲ್ಲಿ ಈ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ತಾಲ್ಲೂಕಿನ ಗ್ರಾಮೀಣ ಕಾರ್ಮಿಕರು ಮತ್ತು ರೈತರ ಹಿತರಕ್ಷಣೆಗಾಗಿ ಪ್ರತಿಭಟನಕಾರರು ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಮಂಡಿಸಿದರು.

ಮನರೇಗಾ ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಬಡವರ ಪಾಲಿಗೆ ಮರಣ ಶಾಸನದಂತಿರುವ ವಿಬಿ ಜಿ ರಾಮ್ ಜಿ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕು. ಮನರೇಗಾ ಯೋಜನೆಯಡಿ ವಾರ್ಷಿಕ ಉದ್ಯೋಗದ ದಿನಗಳನ್ನು 200 ದಿನಗಳಿಗೆ ಹೆಚ್ಚಿಸಬೇಕು. ದಿನಗೂಲಿಯನ್ನು ₹700ಕ್ಕೆ ಹೆಚ್ಚಿಸಬೇಕು ಎಂದು ಪ್ರತಿಭಟನಕಾರರು ಮನವಿ ಮಾಡಿದರು.

ತಾಲ್ಲೂಕಿನ ಎಲ್ಲ ವಸತಿ ರಹಿತ ಬಡವರಿಗೆ ನಿವೇಶನ ಮತ್ತು ಮನೆ ಕಲ್ಪಿಸಿಕೊಡಬೇಕು. ದಶಕಗಳಿಂದ ಭೂಮಿ ನಂಬಿ ಬದುಕುತ್ತಿರುವ ಬಗರ್ ಹುಕುಂ ರೈತರ ಹಕ್ಕು ಪತ್ರಕ್ಕಾಗಿ ಅರ್ಜಿ 53 ಮತ್ತು 57ರ ಅಡಿ ಸಲ್ಲಿಕೆಯಾದ ಎಲ್ಲ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಿ, ಅರ್ಹ ಸಾಗುವಳಿದಾರರಿಗೆ ಸಾಗುವಳಿ ಚೀಟಿ ವಿತರಿಸಬೇಕು ಎಂದು ಒತ್ತಾಯಿಸಿದರು.

ತಾಲ್ಲೂಕಿನಾದ್ಯಂತ ಏಕಕಾಲದಲ್ಲಿ ನಡೆದ ಈ ಜಾಗೃತಿ ಅಭಿಯಾನದಲ್ಲಿ ಸಾವಿರಾರು ಕೃಷಿ ಕೂಲಿಕಾರರು, ಪ್ರಗತಿಪರ ರೈತರು ಮತ್ತು ಮಹಿಳೆಯರು ಗ್ರಾಮ ಪಂಚಾಯಿತಿಗಳ ಎದುರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಗ್ರಾಮೀಣ ಭಾಗದ ಶ್ರಮಿಕ ವರ್ಗದ ಹೊಟ್ಟೆ ಮೇಲೆ ಹೊಡೆಯುವ ನೀತಿಗಳನ್ನು ಕೈಬಿಟ್ಟು, ಅವರ ಬದುಕಿಗೆ ಭದ್ರತೆ ಒದಗಿಸುವ ಕ್ರಮ ಕೈಗೊಳ್ಳದಿದ್ದರೆ, ಉಗ್ರ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.

ಸ್ಥಳೀಯ ಸಂಘಟನೆಗಳ ಪ್ರಮುಖ ಪದಾಧಿಕಾರಿಗಳು ಹಾಗೂ ನೂರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-16-916035927

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.