ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಶೆಟ್ಟೀಕೆರೆಯಲ್ಲಿ ಭಾನುವಾರ ₹5.30 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಸಿ.ಬಿ. ಸುರೇಶ್ಬಾಬು ಭೂಮಿಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು, ರಾಜ್ಯ ಸರ್ಕಾರ ಅನುದಾನ ಹಂಚಿಕೆಯಲ್ಲಿ ರಾಜಕೀಯ ತಾರತಮ್ಯ ಮಾಡುತ್ತಿದೆ. ಆಡಳಿತ ಪಕ್ಷದ ಶಾಸಕರಿಗೆ ₹50 ಕೋಟಿ ಅನುದಾನ ನೀಡಿದರೆ, ವಿರೋಧ ಪಕ್ಷದ ಶಾಸಕರಿಗೆ ಕೇವಲ ₹25 ಕೋಟಿ ನೀಡಲಾಗುತ್ತಿದೆ. ಇಂತಹ ಮಿತಿಯ ಅನುದಾನದಲ್ಲೂ ಈ ರಸ್ತೆ ಅಭಿವೃದ್ಧಿಗೆ ₹5.30 ಕೋಟಿ ಮೀಸಲಿಡಲಾಗಿದೆ. ಇದರೊಂದಿಗೆ ಗಣಿ ಬಾಧಿತ ಪ್ರದೇಶಾಭಿವೃದ್ಧಿ ನಿಧಿಯನ್ನೂ ಬಳಸಿಕೊಂಡು ಈ ರಸ್ತೆಯನ್ನು ಸುಸಜ್ಜಿತಗೊಳಿಸಲಾಗುವುದು ಎಂದರು.

ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ತಿಮ್ಮಯ್ಯ ಮಾತನಾಡಿದರು. ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎಚ್.ಆರ್. ಶಶಿಧರ್ ಹಾಗೂ ಮಹೇಶ್, ದಯಾನಂದ್, ಚಂದ್ರಕಾಂತ್, ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಬೈರೇಶ್, ಎಸ್.ಎಂ. ಪ್ರಕಾಶ್, ಸಿದ್ದರಾಮಯ್ಯ, ಗ್ರಾಮಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-17-1803094812

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.