ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಯೂಟ ಕಾರ್ಯಕ್ರಮಕ್ಕೆ ಶಿವಕುಮಾರ ಸ್ವಾಮೀಜಿ ಹೆಸರು: ಮುಖ್ಯಮಂತ್ರಿ ಬೊಮ್ಮಾಯಿ

Last Updated 1 ಏಪ್ರಿಲ್ 2022, 16:37 IST
ಅಕ್ಷರ ಗಾತ್ರ

ತುಮಕೂರು:‘ಶಾಲೆಗಳಲ್ಲಿ ನೀಡು ತ್ತಿರುವ ಮಧ್ಯಾಹ್ನದ ಬಿಸಿಯೂಟಕ್ಕೆ ಶಿವಕುಮಾರ ಸ್ವಾಮೀಜಿ ಅವರ ಹೆಸರು ಇಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿ ದರು.

ಸಿದ್ಧಗಂಗಾ ಮಠದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಶಿವಕುಮಾರ ಸ್ವಾಮೀಜಿ 115ನೇ ಜಯಂತ್ಯುತ್ಸವ ಕಾರ್ಯಕ್ರಮ ದಲ್ಲಿ ಮಾತನಾಡಿ, ‘ಸ್ವಾಮೀಜಿ ಲಿಂಗೈಕ್ಯ ರಾದ ದಿನವನ್ನು (ಜ. 31) ದಾಸೋಹ ದಿನ ಎಂದು ಆಚರಿಸಲಾಗುತ್ತಿದೆ. ಅದೇ ರೀತಿ ಬಿಸಿಯೂಟಕ್ಕೆ ಸ್ವಾಮೀಜಿ ಅವರಅವರ ಜನ್ಮದಿನದ ನೆನಪಿನಲ್ಲಿ ಇಡಲಾಗುವುದು. ಈ ಕುರಿತು ಶೀಘ್ರ ಆದೇಶ ಹೊರಡಿಸಲಾಗುವುದು’ ಎಂದು ಹೇಳಿದರು.

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು, ಮಧ್ಯಾಹ್ನದ ಬಿಸಿಯೂಟಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಬೇಕು ಎಂಬ ಬೇಡಿಕೆ ಇಟ್ಟಿದ್ದರು. ಮುಖ್ಯಮಂತ್ರಿ ಇದಕ್ಕೆ ಸ್ಪಂದಿಸಿ ಈ ಭರವಸೆ ನೀಡಿದರು.

ಸ್ವಾಮೀಜಿ ವಿರೋಧ: ‘ಮಠದಲ್ಲಿ ಶಿವಕುಮಾರ ಸ್ವಾಮೀಜಿ ಆರಂಭಿ ಸಿದ್ದ ದಾಸೋಹ ಎಲ್ಲರಿಗೂ ಮಾದರಿ ಯಾಗಿದೆ. ಅವರು ಮಾಡುತ್ತಿದ್ದ ಕಾಯಕ ದಿಂದ ಪ್ರೇರಿತರಾಗಿ ಶಾಲೆಗಳಲ್ಲಿ ಬಿಸಿಯೂಟಕ್ಕೆ ಆರಂಭಿಸಲಾಗಿದೆ. ಕಾಯಕದ ಜತೆಗೆ ಸ್ವಾಮೀಜಿ ಹೆಸರು ಸೇರಿಕೊಂಡಿರುವುದರಿಂದ ಶಿವ ಕುಮಾರ ಸ್ವಾಮೀಜಿ ಹೆಸರು ಇಡುವ ಅಗತ್ಯವಿಲ್ಲ’ ಎಂದು ಸಿದ್ಧಗಂಗಾ ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಪ್ರತಿಪಾದಿಸಿದರು.

ಪಠ್ಯಕ್ಕೆ ಬೇಡಿಕೆ: ಶಾಸಕ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ‘ಶಿವಕುಮಾರ ಸ್ವಾಮೀಜಿ ಜೀವನ ಚರಿತ್ರೆಯನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡುವ ಅಗತ್ಯವಿದೆ. ಹಾಗಾಗಿ ಸ್ವಾಮೀಜಿ ಅವರ ಜೀವನ ಚರಿತ್ರೆಯನ್ನು ಪಠ್ಯದಲ್ಲಿ ಅಳವಡಿಸಲು ಕ್ರಮ ಕೈಗೊಳ್ಳ ಬೇಕು’ ಎಂದು ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT