ಮಧುಗಿರಿ: ₹800 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಜೂನ್ 28ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪಟ್ಟಣಕ್ಕೆ ಭೇಟಿ ನೀಡಲಿದ್ದಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದರು.

ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ತಾಲ್ಲೂಕು ಮಟ್ಟದ ಸಭೆಯಲ್ಲಿ ಮಾತನಾಡಿದರು.

ಬಡವರಿಗೆ ನಿವೇಶನ ಹಕ್ಕುಪತ್ರ, ಮನೆ ಮಂಜೂರಾತಿ ಆದೇಶ ಪತ್ರ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿ ಭೂಮಿಪೂಜೆ ನೆರವೇರಿಸಲಿದ್ದಾರೆ. ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಬೇಕು ಎಂದರು.

ತಾಲ್ಲೂಕಿನ ಐ.ಡಿ.ಹಳ್ಳಿ ಹೋಬಳಿ ದೊಡ್ಡ ದಾಳವಟ್ಟ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯವನ್ನು ₹6 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ದೇವಾಲಯ ಪ್ರಗತಿಯಲ್ಲಿದ್ದು, ಮತ್ತೆ ₹50 ಲಕ್ಷ ಮಂಜೂರು ಮಾಡಿಸಲಾಗುವುದು. ಶೀಘ್ರ ದೇವಾಲಯದ ಕೆಲಸಗಳನ್ನು ಪೂರ್ಣಗೊಳ್ಳಬೇಕು ಎಂದು ಸಮಿತಿಗೆ ಸೂಚಿಸಿದರು. ಜೂನ್ 13ರಂದು ಸಂಜೆ 4 ಗಂಟೆಗೆ ದೇವಾಲಯ ಆವರಣದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರ ಸಭೆ ಕರೆಯಲಾಗಿದೆ ಎಂದರು.

ಕೆ.ಆರ್.ಬಡಾವಣೆ ಸರ್ಕಾರಿ ಸಂಯುಕ್ತ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಸಹಕಾರ ಸಚಿವ ಕೆ.ಎನ್.ರಾಜಣ್ಣ ನೋಟ್ ಪುಸ್ತಕ ವಿತರಿಸಿದರು

ಉಪವಿಭಾಗಾಧಿಕಾರಿ ಗೊಟೋರು ಶಿವಪ್ಪ, ತಹಶೀಲ್ದಾರ್ ಶಿರಿನ್ ತಾಜ್, ಡಿವೈಎಸ್ಪಿ ಮಂಜುನಾಥ್, ತಾ.ಪಂ.ಇಒ ಲಕ್ಷ್ಮಣ್, ಎಒ ಮಧುಸೂದನ್, ಬಿಇಒ ಹನುಮಂತರಾಯಪ್ಪ, ಪುರಸಭೆ ಅಧ್ಯಕ್ಷ ಲಾಲಾಪೇಟೆ ಮಂಜುನಾಥ್, ಮಾಜಿ ಅಧ್ಯಕ್ಷ ಎಂ.ಕೆ.ನಂಜುಂಡಯ್ಯ, ಸದಸ್ಯರಾದ ಅಲೀಂ, ಮಂಜುನಾಥ್ ಆಚಾರ್, ಎಂ.ಶ್ರೀಧರ್, ಮುಖ್ಯಾಧಿಕಾರಿ ಸುರೇಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.