ಚಿಕ್ಕನಾಯಕನಹಳ್ಳಿ: ಬೋರನಕಣಿವೆ ಜಲಾಶಯದ ಕೆಳಭಾಗದ 12 ಗ್ರಾಮಗಳ ಜನ-ಜಾನುವಾರುಗಳ ಹಿತದೃಷ್ಟಿಯಿಂದ ಹಾಗೂ ಅಂತರ್ಜಲ ವೃದ್ಧಿಗಾಗಿ ನೀರು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಸಪ್ತಶ್ರೀ ತಿಳಿಸಿದರು.

ಬೋರನಕಣಿವೆ ಅಚ್ಚುಕಟ್ಟು ಪ್ರದೇಶದ ಗ್ರಾಮಗಳಿಗೆ ಕುಡಿಯುವ ನೀರು ಮತ್ತು ಕೃಷಿ ಚಟುವಟಿಕೆಗಳಿಗಾಗಿ ನೀರು ಬಿಡುಗಡೆ ಮಾಡುವ ಸಂಬಂಧ ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಮಂಗಳವಾರ ನೀರಿನ ಸಲಹಾ ಸಮಿತಿ ಸಭೆ ಜರುಗಿತು.

ಜಲಾಶಯದ ಪ್ರಸ್ತುತ ನೀರಿನ ಪ್ರಮಾಣ 605.88 ಎಂಸಿಎಫ್ಟಿ ಇದ್ದು, ಇದರಲ್ಲಿ ಡೆಡ್ ಸ್ಟೋರೇಜ್ ಹಾಗೂ ಆವಿಯಾಗುವಿಕೆ ಪ್ರಮಾಣ ಕಳೆದು ಲಭ್ಯವಿರುವ ನೀರಿನಲ್ಲಿ ಸುಮಾರು 20 ಎಂಸಿಎಫ್ಟಿ ನೀರನ್ನು ಸತತ 15 ದಿನ ಹೊರಬಿಡಲು ಯೋಜಿಸಲಾಗಿದೆ. ಹುಳಿಯಾರು ಪಟ್ಟಣದ ಕುಡಿಯುವ ನೀರಿನ ಅಗತ್ಯತೆ ಕಾಯ್ದಿರಿಸಿ ಈ ಪ್ರಕ್ರಿಯೆ ನಡೆಯಲಿದೆ. ಸಂಬಂಧಪಟ್ಟ ಎಂಜಿನಿಯರ್ಗಳಿಂದ ಮೇ 2ರೊಳಗೆ ವರದಿ ಪಡೆದ ನಂತರ ಅಧಿಕೃತವಾಗಿ ನೀರು ಬಿಡಲಾಗುವುದು ಎಂದು ಸ್ಪಷ್ಟಪಡಿಸಿದರು.

ಸಭೆಯಲ್ಲಿ ಭಾಗವಹಿಸಿದ್ದ ಅಚ್ಚುಕಟ್ಟು ಪ್ರದೇಶದ ರೈತರು, ಪ್ರಸ್ತುತ ಭೀಕರ ಬರಗಾಲ ಮತ್ತು ಬಿಸಿಲಿನ ತಾಪದಿಂದಾಗಿ ಅಂತರ್ಜಲ ಕುಸಿದಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು.

ಕೊಳವೆ ಬಾವಿಗಳು ಬತ್ತಿ ಹೋಗಿದ್ದು, ಮೇವು ಒಣಗುತ್ತಿದೆ. ಕೃಷಿ ಮತ್ತು ಪಶುಸಂಗೋಪನೆಯನ್ನೇ ನಂಬಿರುವ ಕುಟುಂಬಗಳು ಸಂಕಷ್ಟದಲ್ಲಿವೆ. ಹಳ್ಳ-ಕೊಳ್ಳಗಳು ಒಣಗಿರುವುದರಿಂದ ನೀರು ಹರಿಯಲು ವಿಳಂಬವಾಗಬಹುದು. ಆದ್ದರಿಂದ ವಿಳಂಬ ಮಾಡದೆ ಶೀಘ್ರ ನೀರು ಬಿಡುಗಡೆ ಮಾಡಬೇಕು ಎಂದು ಅಧಿಕಾರಿಗಳಿಗೆ ಮನವಿ ಮಾಡಿದರು.

ತಹಶೀಲ್ದಾರ್ ಎಂ. ಮಮತಾ ಮಾತನಾಡಿ, ಮೇ 2ರ ವರದಿ ನಂತರ ಕ್ರಮ ಕೈಗೊಳ್ಳಲಾಗುವುದು. ನೀರು ಹರಿಸುವಾಗ ಯಾವುದೇ ಹಂತದಲ್ಲಿ ಪೋಲಾಗದಂತೆ ಎಚ್ಚರಿಕೆ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಒಂದು ವೇಳೆ ಈ ಮಧ್ಯೆ ಮಳೆ ಬಂದರೆ ನೀರು ಬಿಡುವ ನಿರ್ಧಾರವನ್ನು ಪುನರ್ ಪರಿಶೀಲಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಕೃಷಿ, ತೋಟಗಾರಿಕೆ, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು, ಹುಳಿಯಾರು ಪಟ್ಟಣ ಪಂಚಾಯಿತಿ ಪ್ರತಿನಿಧಿಗಳು ಹಾಗೂ ಅಚ್ಚುಕಟ್ಟು ಪ್ರದೇಶದ ನೂರಾರು ಗ್ರಾಮಸ್ಥರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-17-1193118590

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.