ಚಿಕ್ಕನಾಯಕನಹಳ್ಳಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಗ್ರ ಅಭಿವೃದ್ಧಿಗೆ ನಮ್ಮ ಸಂಪೂರ್ಣ ಸಹಕಾರವಿದ್ದು, ಕಾಲೇಜಿನ ರಕ್ಷಣೆಗಾಗಿ ಸುಸಜ್ಜಿತ ಕಾಂಪೌಂಡ್, ಕುಡಿಯುವ ನೀರಿಗೆ ಬೋರ್ವೆಲ್ ಕೊರೆಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಸಿ.ಬಿ. ಸುರೇಶ್ಬಾಬು ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ನಡೆದ 2025-26ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ಎನ್ಎಸ್ಎಸ್, ಯುವ ರೆಡ್ ಕ್ರಾಸ್, ರೋವರ್ಸ್ ಮತ್ತು ರೇಂಜರ್ಸ್ ಸೇರಿದಂತೆ ವಿವಿಧ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಕಾಲೇಜಿಗೆ 30 ಆಧುನಿಕ ಕಂಪ್ಯೂಟರ್ಗಳನ್ನು ಶೀಘ್ರದಲ್ಲೇ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಹಾಸ್ಯ ಕಲಾವಿದ ಮಿಮಿಕ್ರಿ ಗೋಪಿ ಮಾತನಾಡಿ, ಯೌವನದ ಈ ಅಮೂಲ್ಯ ಅವಧಿಯೇ ಸಾಧನೆಗೆ ಪ್ರಶಸ್ತ ಸಮಯ. ಪೋಷಕರು ನಿಮ್ಮ ಮೇಲಿಟ್ಟಿರುವ ನಂಬಿಕೆ ಉಳಿಸಿಕೊಳ್ಳಿ ಎಂದರು.

ವಿವಿಧ ಚಲನಚಿತ್ರ ನಟರು ಹಾಗೂ ಪ್ರಮುಖ ರಾಜಕಾರಣಿಗಳ ಧ್ವನಿ ಮಿಮಿಕ್ರಿ ಮೂಲಕ ನೆರೆದಿದ್ದ ವಿದ್ಯಾರ್ಥಿಗಳನ್ನು ರಂಜಿಸಿದರು.

ಪ್ರಾಂಶುಪಾಲೆ ಜ್ಯೋತಿ ಎಂ.ಜೆ. ಮಾತನಾಡಿದರು.

ರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಎಂಟು ಚಿನ್ನದ ಪದಕ, 6 ಬೆಳ್ಳಿ ಪದಕ ಹಾಗೂ ಏಳು ಕಂಚಿನ ಪದಕಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ಕಾಲೇಜು ಅಂತರರಾಜ್ಯ ಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಎಂ.ಎಸ್.ಡಬ್ಲು ವಿಭಾಗದಲ್ಲಿ ಕಾಲೇಜಿಗೆ ಐದು ರ್ಯಾಂಕ್ಗಳು ಲಭಿಸಿವೆ. ಯುವಜನ ಮೇಳದಲ್ಲಿ ಭಾಗವಹಿಸಿ ಸೋಮನಕುಣಿತ, ಭಜನೆ ಸೇರಿದಂತೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿದ್ದಾರೆ ಎಂದರು.

ಪಿಎಲ್ಡಿ ಬ್ಯಾಂಕ್ ನಿರ್ದೇಶಕ ರಾಮಚಂದ್ರಯ್ಯ, ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಶಿವಣ್ಣ, ರಮೇಶ್, ಸಂಗೀತ ಸಂಯೋಜಕ ಸಂಜಯ್ ಶ್ರೀವತ್ಸ, ಕಾರ್ಯಕ್ರಮದ ಸಂಚಾಲಕ ನಾಗರಾಜಕುಮಾರ, ಕ್ರೀಡಾ ಸಂಚಾಲಕ ಡಾ. ಶೈಲೇಂದ್ರಕುಮಾರ್, ಎನ್ಎಸ್ಎಸ್ ಅಧಿಕಾರಿಗಳಾದ ಡಾ. ತಿಮ್ಮೇಗೌಡ, ಸುಧರಾಣಿ, ನಾಗರಾಜು ಬಿ.ಜಿ ಸೇರಿದಂತೆ ಬೋಧಕ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-17-450378454

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.