ಚಿಕ್ಕನಾಯಕನಹಳ್ಳಿ: ಪಟ್ಟಣದ ವಿವಿಧ ವಾರ್ಡ್ಗಳಲ್ಲಿ ಉಲ್ಬಣಿಸಿರುವ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂದು ಪುರಸಭೆ ಆಡಳಿತಾಧಿಕಾರಿಯೂ ಆದ ಉಪವಿಭಾಗಾಧಿಕಾರಿ ಸಪ್ತಶ್ರೀ ನಿರ್ದೇಶಿಸಿದರು.

ಪುರಸಭೆ ಅಧಿಕಾರಿಗಳ ಜತೆ ಬುಧವಾರ ಸಭೆ ನಡೆಸಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಿದರು. ಸಾರ್ವಜನಿಕರ ದೂರುಗಳಿಗೆ ತಕ್ಷಣವೇ ಸ್ಪಂದಿಸದ ಅಧಿಕಾರಿಗಳು, ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ನೀರಿಲ್ಲದೆ ಸ್ಥಗಿತಗೊಂಡಿರುವ ಕೊಳವೆ ಬಾವಿಗಳನ್ನು ಅತ್ಯಾಧುನಿಕ ಕ್ಯಾಮೆರಾ ಮೂಲಕ ತಾಂತ್ರಿಕವಾಗಿ ಪರೀಕ್ಷೆಗೆ ಒಳಪಡಿಸಬೇಕು. ಭೂಗರ್ಭದಲ್ಲಿನ ನೀರಿನ ಲಭ್ಯತೆ, ಪ್ರಸ್ತುತ ಇರುವ ಮೋಟಾರ್ಗಳ ಸಾಮರ್ಥ್ಯವನ್ನು ಪರಿಶೀಲಿಸಿ ತಕ್ಷಣವೇ ವರದಿ ಸಲ್ಲಿಸಬೇಕು ಎಂದು ಎಂಜಿನಿಯರುಗಳಿಗೆ ಆದೇಶಿಸಿದರು.

ನೀರು ಸರಬರಾಜು ಮಾಡುವ ಮುಖ್ಯ ಕೊಳವೆ ಮಾರ್ಗದಿಂದ ಪಡೆದಿರುವ ಎಲ್ಲ ಅಕ್ರಮ ಸಂಪರ್ಕಗಳನ್ನು ತಕ್ಷಣವೇ ಕಡಿತಗೊಳಿಸಬೇಕು. ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ಲಭ್ಯವಾಗುವಂತೆ ಮಾಡಲು ಎಲ್ಲ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಕಡ್ಡಾಯವಾಗಿ ಡಿಜಿಟಲ್ ಸ್ಕ್ಯಾನರ್ ಅಳವಡಿಸಬೇಕು. ವಾಟರ್ಮ್ಯಾನ್ಗಳು ಯಾವುದೇ ತಾರತಮ್ಯವಿಲ್ಲದೆ ನಿಗದಿತ ಸಮಯಕ್ಕೆ ನೀರು ಸರಬರಾಜು ಮಾಡಬೇಕು ಎಂದು ಸೂಚಿಸಿದರು.

ಕಸ ಸಂಗ್ರಹಿಸುವ ವಾಹನಗಳ ಸಂಚಾರ ಹಾಗೂ ನಿಗದಿತ ಜಾಗದಿಂದ ತ್ಯಾಜ್ಯ ಸಂಗ್ರಹ, ವಿಲೇವಾರಿ ಬಗ್ಗೆ ನಿರಂತರವಾಗಿ ಗಮನ ಹರಿಸಲು ಜಿಪಿಎಸ್ ವ್ಯವಸ್ಥೆ ಅಳವಡಿಸುವಂತೆ ಆದೇಶಿಸಿದರು.

ಪಟ್ಟಣದಲ್ಲಿರುವ ಖಾಲಿ ನಿವೇಶನಗಳ ಮಾಲೀಕರಿಗೆ ನೋಟಿಸ್ ಜಾರಿ ಮಾಡಿ, 15 ದಿನಗಳ ಒಳಗಾಗಿ ಸ್ವಚ್ಛಗೊಳಿಸಲು ಗಡುವು ನೀಡಬೇಕು. ತಪ್ಪಿದಲ್ಲಿ ಪುರಸಭೆ ವತಿಯಿಂದ ಸ್ವಚ್ಛಗೊಳಿಸಿ, ಅದರ ವೆಚ್ಚ ಹಾಗೂ ದಂಡವನ್ನು ಮಾಲೀಕರಿಂದ ವಸೂಲಿ ಮಾಡುವಂತೆ ಸೂಚಿಸಿದರು.

ಪುರಸಭೆ ಮುಖ್ಯಾಧಿಕಾರಿ ಸೇರಿದಂತೆ ಎಂಜಿನಿಯರ್, ಕಂದಾಯ ಇನ್ಸ್ಪೆಕ್ಟರ್, ಆರೋಗ್ಯ ಇನ್ಸ್ಪೆಕ್ಟರ್ಗಳು ಕಚೇರಿ ಅವಧಿಯಲ್ಲಿ ಕಡ್ಡಾಯವಾಗಿ ಸಾರ್ವಜನಿಕರ ಭೇಟಿಗೆ ಲಭ್ಯವಿರಬೇಕು. ಜವಾಬ್ದಾರಿ ನಿರ್ವಹಣೆಯಲ್ಲಿ ಲೋಪವೆಸಗಿದರೆ ಸಹಿಸುವುದಿಲ್ಲ. ನಾಗರಿಕರ ಅನುಕೂಲಕ್ಕಾಗಿ ಪಟ್ಟಣದ ಎಲ್ಲ 23 ವಾರ್ಡ್ಗಳಿಗೂ ತಕ್ಷಣವೇ ನಾಮಫಲಕ ಅಳವಡಿಸುವಂತೆ ಅಧಿಕಾರಿಗಳಿಗೆ ಗಡುವು ನೀಡಿದರು.

ಸಭೆಯಲ್ಲಿ ತಹಶೀಲ್ದಾರ್ ಮಮತಾ, ಪುರಸಭೆ ಮುಖ್ಯಾಧಿಕಾರಿ ಮಂಜಮ್ಮ, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-17-1537929940

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.