ಚಿಕ್ಕನಾಯಕನಹಳ್ಳಿ: ತಾಲ್ಲೂಕು ಅಗ್ನಿಶಾಮಕ ಠಾಣೆಯಲ್ಲಿ ಮಂಗಳವಾರ ‘ಅಗ್ನಿಶಾಮಕ ಸೇವಾ ಸಪ್ತಾಹ’ ನಡೆಯಿತು.

ಸಂವಿಧಾನ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.

ಅಗ್ನಿ ಅವಘಡಗಳನ್ನು ತಡೆಗಟ್ಟುವಲ್ಲಿ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ. ಪೆಟ್ರೋಲ್ ಬಂಕ್, ಬಸ್ ನಿಲ್ದಾಣ ಹಾಗೂ ಜನನಿಬಿಡ ಅಂಗಡಿ ಮುಂಗಟ್ಟುಗಳಂತಹ ಪ್ರದೇಶಗಳಲ್ಲಿ ಸಾರ್ವಜನಿಕರು ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ನಿರ್ಧರಿಸಲಾಯಿತು.

ಜಾಗೃತಿ ಅಭಿಯಾನದ ಭಾಗವಾಗಿ, ಅಗ್ನಿ ಸುರಕ್ಷತಾ ನಿಯಮಗಳನ್ನು ಒಳಗೊಂಡ ಕರಪತ್ರಗಳನ್ನು ಸಾರ್ವಜನಿಕರಿಗೆ ವಿತರಿಸುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.

ಶಾಸಕ ಸಿ.ಬಿ. ಸುರೇಶ್ ಬಾಬು ಮಾತನಾಡಿ, ತಾಲ್ಲೂಕು ವಿಶಾಲ ವಿಸ್ತೀರ್ಣ ಹೊಂದಿರುವುದರಿಂದ ಹುಳಿಯಾರು ಭಾಗದಲ್ಲೊಂದು ಅಗ್ನಿಶಾಮಕ ಠಾಣೆ ಪ್ರಾರಂಭಿಸಲು ಈಗಾಗಲೇ ಪ್ರಕ್ರಿಯೆ ಪ್ರಾರಂಭವಾಗಿದೆ ಎಂದು ಹೇಳಿದರು.

ಠಾಣಾಧಿಕಾರಿ ರಮೇಶ್ ಮಾತನಾಡಿದರು. ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಲೀಡರ್ಗಳಾದ ವೈ.ನಾಗರಾಜು, ನವೀನ್ಕುಮಾರ್ ವೈ.ಎಸ್., ಪ್ರಕಾಶ್ ಸಿ.ಇ., ಚಂದ್ರಗುಪ್ತ, ಬಾಗಣ್ಣ, ಅವಿನಾಶ್, ಬಸವರಾಜು ಹಾಗೂ ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-17-2036718852

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.