ಚಿಕ್ಕನಾಯಕನಹಳ್ಳಿ: ತಾಲ್ಲೂಕಿನಾದ್ಯಂತ ಕಳೆದ ಕೆಲವು ತಿಂಗಳಿನಿಂದ ಬಿಸಿಲಿನ ಧಗೆಗೆ ಕೆಂಗಟ್ಟಿದ್ದ ಜನರಿಗೆ ಸೋಮವಾರ ಮಳೆ ತಂಪೆರೆಯಿತು.

ತಾಲ್ಲೂಕಿನ ಶೆಟ್ಟಿಕೆರೆ, ಸಾಲ್ಕಟ್ಟೆ ಕ್ರಾಸ್, ಮತ್ತಿಘಟ್ಟ, ಬೈಲಪ್ಪನ ಮಠ, ಪಾಪನಕೋಣ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ. ಅಶ್ವಿನಿ ಮಳೆ ಕೈಕೊಟ್ಟಿದ್ದರಿಂದ ಕಂಗಾಲಾಗಿದ್ದ ರೈತರಿಗೆ, ಭರಣಿ ಮಳೆಯು ಆರಂಭದ ದಿನವೇ ಭರವಸೆ ಮೂಡಿಸಿದೆ. ಈ ವರ್ಷ ಭರಣಿ ಮಳೆ ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಸುರಿಯಲಿದೆ ಎಂಬ ನಂಬಿಕೆ ರೈತರಲ್ಲಿ ಮೊಳಕೆಯೊಡೆದಿದೆ.

ಮಳೆಯೊಂದಿಗೆ ಬೀಸಿದ ಗಾಳಿಗೆ ಸಾಲ್ಕಟ್ಟೆ ಕ್ರಾಸ್ ಹಾಗೂ ಬೈಲಪ್ಪನ ಮಠ ಪ್ರದೇಶಗಳಲ್ಲಿ ಮರಗಳು ರಸ್ತೆಗೆ ಅಡ್ಡಲಾಗಿ ಉರುಳಿವೆ. ಇದರಿಂದಾಗಿ ಈ ಮಾರ್ಗಗಳಲ್ಲಿ ಸಂಚರಿಸುವ ವಾಹನ ಸವಾರರು ಹಾಗೂ ಸಾರ್ವಜನಿಕರು ಕೆಲಕಾಲ ತೊಂದರೆ ಅನುಭವಿಸಬೇಕಾಯಿತು. ಮರಗಳನ್ನು ತೆರವುಗೊಳಿಸಿದ ನಂತರ ಸಂಚಾರ ವ್ಯವಸ್ಥೆ ಸುಗಮಗೊಂಡಿತು.

ಬಿಸಿಲಿನ ತಾಪಕ್ಕೆ ಒಣಗುತ್ತಿದ್ದ ಅಡಿಕೆ ಮತ್ತು ತೆಂಗಿನ ತೋಟಗಳಿಗೆ ಈ ಮಳೆ ವರದಾನವಾಗಿದೆ. ಮಣ್ಣು ಹದವಾಗುತ್ತಿದ್ದಂತೆಯೇ ರೈತರು ಬಿತ್ತನೆ ಕಾರ್ಯಕ್ಕೆ ಹಾಗೂ ಭೂಮಿ ಸಿದ್ಧತೆಗೆ ಮುಂದಾಗುವ ಸಂಭ್ರಮದಲ್ಲಿದ್ದಾರೆ. ತಾಲ್ಲೂಕಿನ ಅಂತರ್ಜಲ ಮಟ್ಟ ಸುಧಾರಣೆಗೂ ಸಹಕಾರಿಯಾಗಲಿದೆ ಎಂದು ಜನರು ಅಂದಾಜಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-17-1426164411

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.