ಚಿಕ್ಕನಾಯಕನಹಳ್ಳಿ: ಉತ್ತಮ ಹಾಲು ಉತ್ಪಾದನೆಗಾಗಿ ಹಸುಗಳಿಗೆ ಕೃತಕ ಗರ್ಭಧಾರಣೆ ತಂತ್ರಜ್ಞಾನ ಪರಿಚಯಿಸಿದ ಕೀರ್ತಿ ರಾಜ್ಯಕ್ಕೆ ಸಲ್ಲುತ್ತದೆ ಎಂದು ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.

ತಾಲ್ಲೂಕಿನ ಕಸಬಾ ಹೋಬಳಿ ನವಿಲೆಯಲ್ಲಿ ನಡೆದ ‘ಹಾಲು ಉತ್ಪಾದಕರ ಸಹಕಾರ ಸಂಘ’ದ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು.

ವಿಶ್ವದಲ್ಲೇ ಭಾರತ ಅತಿ ಹೆಚ್ಚು ಹಾಲು ಉತ್ಪಾದಿಸುವ ರಾಷ್ಟ್ರವಾಗಿದ್ದು, ಇದರಲ್ಲಿ ಶೇ 80ರಷ್ಟು ಮಹಿಳೆಯರ ಶ್ರಮ ಅಡಗಿದೆ. 1969ರಲ್ಲಿ ಎಚ್.ಎಫ್. ತಳಿ ಅಭಿವೃದ್ಧಿಗಾಗಿ ಕೃತಕ ಗರ್ಭಧಾರಣೆ ಪ್ರಕ್ರಿಯೆ ಆರಂಭವಾಯಿತು. ರೈತರು ವೈಜ್ಞಾನಿಕ ಪದ್ಧತಿ ಅನುಸರಿಸಿದರೆ ಎಚ್.ಎಫ್. ತಳಿಯ ಹಸುಗಳಿಂದ 8ರಿಂದ 12 ಲೀಟರ್ ಹಾಲು ಪಡೆಯಲು ಸಾಧ್ಯವಿದೆ ಎಂದರು.

ತುಮುಲ್ ನಿರ್ದೇಶಕ ಬಿ.ಎನ್. ಶಿವಪ್ರಕಾಶ್ ಮಾತನಾಡಿ, ರಾಸುಗಳ ಆರೋಗ್ಯ ತಪಾಸಣೆಗೆ ವೈದ್ಯರ ಕೊರತೆಯಿರುವ ಬಗ್ಗೆ ಪ್ರಸ್ತಾಪಿಸಿ ಪಶುವೈದ್ಯಕೀಯ ಶಿಕ್ಷಣ ಪಡೆದ ಅಭ್ಯರ್ಥಿಗಳು ಮುಂದೆ ಬಂದರೆ 70 ಸಾವಿರ ರೂಪಾಯಿ ವೇತನ ನೀಡಿ ನೇಮಕ ಮಾಡಿಕೊಳ್ಳಲು ಒಕ್ಕೂಟ ಸಿದ್ಧವಿದೆ ಎಂಬ ಮಹತ್ವದ ಘೋಷಣೆ ಮಾಡಿದರು.

ಟಿಎಪಿಸಿಎಂಎಸ್ ಅಧ್ಯಕ್ಷ ಎನ್. ಶ್ರೀಧರ್ ಮಾತನಾಡಿ, ರಾಸುಗಳ ಆರೋಗ್ಯದ ದೃಷ್ಟಿಯಿಂದ ತಿಂಗಳಿಗೆ ಎರಡು ಬಾರಿ ಸಂಚಾರಿ ಪಶುವೈದ್ಯರು ಭೇಟಿ ನೀಡಿ ಆರೋಗ್ಯ ತಪಾಸಣೆ ನಡೆಸುವಂತೆ ಒಕ್ಕೂಟದ ನಿರ್ದೇಶಕರಿಗೆ ಮನವಿ ಮಾಡಿದರು.

ನವಿಲೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ರವಿಕುಮಾರ್, ಕುಪ್ಪೂರು ವಿಎಸ್ಎಸ್ಎನ್ ಉಪಾಧ್ಯಕ್ಷೆ ಶೈಲಾ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಪ್ರೇಮಾನಂದ್, ಗ್ರಾ.ಪಂ ಸದಸ್ಯರಾದ ಮಧು, ಗಾಯತ್ರಿ, ಸಂಘದ ಪ್ರಮುಖರಾದ ಎನ್.ವಿ. ಚಂದ್ರಶೇಖರಯ್ಯ, ದಯಾನಂದಸ್ವಾಮಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260327-17-1574603197

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.