ಚಿಕ್ಕನಾಯಕನಹಳ್ಳಿ: ಗೋಡೆಕೆರೆ ಮಠದ ಚರಪಟ್ಟಾಧ್ಯಕ್ಷ ಮೃತ್ಯುಂಜಯ ದೇಶೀಕೇಂದ್ರ ಸ್ವಾಮೀಜಿ ಅವರ ಧಾರ್ಮಿಕ ಮತ್ತು ಸಾಮಾಜಿಕ ಸೇವೆಯನ್ನು ಗೌರವಿಸಲು ಮೇ 10ರಂದು ಗೋಡೆಕೆರೆಯಲ್ಲಿ ‘ಗುರುವಂದನಾ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಬೆಳ್ಳಾವಿ ಕಾರದ ವೀರಬಸವ ಸ್ವಾಮೀಜಿ ತಿಳಿಸಿದರು.

ಗೋಡೆಕೆರೆಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನ ನೀರಾವರಿ ಹೋರಾಟ, ಪರಿಸರ ಸಂರಕ್ಷಣೆ ಹಾಗೂ ಜನರ ಆರೋಗ್ಯಕ್ಕಾಗಿ ಅವರು ನೀಡಿರುವ ಕೊಡುಗೆ ಸ್ಮರಿಸಲು ಭಕ್ತ ಸಮೂಹ ಈ ಮಹೋತ್ಸವ ಹಮ್ಮಿಕೊಂಡಿದೆ ಎಂದರು.

ಗುಬ್ಬಿ ತಾಲ್ಲೂಕು ಗೊಲ್ಲಹಳ್ಳಿ ಮಠದ ವಿಭವ ವಿದ್ಯಾಶಂಕರ ದೇಶೀಕೇಂದ್ರ ಸ್ವಾಮೀಜಿ ಮಾತನಾಡಿ, ಧ್ವಜಾರೋಹಣವನ್ನು ಕುಪ್ಪೂರು-ತಮ್ಮಡಿಹಳ್ಳಿ ಮಠದ ಅಭಿನವ ಮಲ್ಲಿಕಾರ್ಜುನ ಸ್ವಾಮೀಜಿ ನೆರವೇರಿಸುತ್ತಾರೆ. ಗುರುಸಿದ್ದರಾಮೇಶ್ವರ ಸ್ವಾಮಿ ಉತ್ಸವ ಜರುಗಲಿದೆ. ಸಿಡ್ಲೆಹಳ್ಳಿ ಇಮ್ಮಡಿ ಕರಿಬಸವ ಸ್ವಾಮಿ, ಕೋಳಗುಂದದ ಜಯಚಂದ್ರಶೇಖರ ಸ್ವಾಮಿ ಸೇರಿದಂತೆ ನಾಡಿನ ವಿವಿಧ ಮಠಾಧೀಶರು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಸ್ವಾಗತ ಸಮಿತಿ ಅಧ್ಯಕ್ಷ ಎಂ.ಎಂ. ಜಗದೀಶ್ ಮಾತನಾಡಿದರು.

ಗುತ್ತಿಗೆದಾರ ರಾಯಸಂದ್ರ ರವಿಕುಮಾರ್ ಮಾತನಾಡಿ, ಸಮಾರಂಭಕ್ಕೆ 10 ಸಾವಿರಕ್ಕೂ ಹೆಚ್ಚು ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ. ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ನಿರಂತರ ದಾಸೋಹ ವ್ಯವಸ್ಥೆ ಇರಲಿದೆ ಎಂದರು.

ಕೇಂದ್ರ ಸಚಿವ ವಿ. ಸೋಮಣ್ಣ, ಸಚಿವರಾದ ಎಂ.ಬಿ. ಪಾಟೀಲ, ಜಿ.ಪರಮೇಶ್ವರ, ಶಾಸಕ ಸಿ.ಬಿ. ಸುರೇಶ್ ಬಾಬು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ, ಶಾಸಕ ಜ್ಯೋತಿ ಗಣೇಶ್, ಮಾಜಿ ಸಂಸದ ಜಿ.ಎಸ್. ಬಸವರಾಜು ಭಾಗವಹಿಸಲ್ಲಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-17-591129790

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.