ಚಿಕ್ಕನಾಯಕನಹಳ್ಳಿ: ‘ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟವು ಬಡ ಕುಟುಂಬಗಳ ನೆಮ್ಮದಿ ಕೆಡಿಸುತ್ತಿದೆ. ಮಹಿಳೆಯರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅಕ್ರಮ ಮದ್ಯ ಮಾರಾಟ ನಿಷೇಧಿಸುವಂತೆ ಸರ್ಕಾರಕ್ಕೆ ಸಲಹೆ ನೀಡಿ, ಮಹಿಳೆಯರ ಪರವಾಗಿ ಧ್ವನಿ ಎತ್ತಬೇಕು’ ಎಂದು ಶಾಸಕ ಸಿ.ಬಿ. ಸುರೇಶ್ಬಾಬು ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮದ್ಯದ ಹಾವಳಿ ಮತ್ತು ಶೈಕ್ಷಣಿಕ ಪ್ರಗತಿಯ ಬಗ್ಗೆ ಮಾತನಾಡಿದರು.

‘ಕೂಲಿ ಕೆಲಸ ಮಾಡಿ ಜೀವನ ಸಾಗಿಸುವ ಬಡ ಕುಟುಂಬಗಳ ಪುರುಷರು ತಾವು ದುಡಿದ ಹಣವನ್ನೆಲ್ಲ ಮದ್ಯಕ್ಕಾಗಿ ವ್ಯಯಿಸುತ್ತಿದ್ದಾರೆ. ಇದರಿಂದ ಕುಟುಂಬ ನಿರ್ವಹಣೆ, ಮಕ್ಕಳ ಶಿಕ್ಷಣ ಹಾಗೂ ಬೆಳವಣಿಗೆಯ ಜವಾಬ್ದಾರಿ ಹೊತ್ತಿರುವ ಮಹಿಳೆಯರು ಹೈರಾಣಾಗಿದ್ದಾರೆ. ಮದ್ಯಪಾನದ ದುಷ್ಪರಿಣಾಮವು ನೇರವಾಗಿ ಮಹಿಳೆಯರ ಮೇಲೆ ಬೀರುತ್ತಿರುವುದರಿಂದ ಮಹಿಳಾ ಆಯೋಗದ ಅಧ್ಯಕ್ಷರು ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಮುಖ್ಯಮಂತ್ರಿಗೆ ಈ ಕುರಿತು ಸೂಕ್ತ ಸಲಹೆ ನೀಡಿ, ಮದ್ಯ ಮಾರಾಟಕ್ಕೆ ಲಗಾಮು ಹಾಕುವ ಮೂಲಕ ಬಡ ಕುಟುಂಬಗಳನ್ನು ರಕ್ಷಿಸಬೇಕು’ ಎಂದು ಒತ್ತಾಯಿಸಿದರು.

ಗ್ರಾಮೀಣ ಭಾಗದ ಮತ್ತು ರೈತರ ಮಕ್ಕಳಿಗೆ ಅನುಕೂಲವಾಗುವಂತೆ ಎಸ್.ಬಿ. ಚಾರಿಟಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾಗಿದ್ದ ಜ್ಞಾನ ಕಲ್ಪ ಉಚಿತ ನೀಟ್, ಸಿಇಟಿ ಹಾಗೂ ಜೆಇಇ ತರಬೇತಿ ಕೇಂದ್ರದ ವಿದ್ಯಾರ್ಥಿಗಳು ಈ ಬಾರಿಯ ಕೃಷಿ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಮೇ 10 ರಂದು ಹಾಸನ, ಹಿರಿಯೂರು ಹಾಗೂ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯಗಳಲ್ಲಿ ನಡೆದ ಪರೀಕ್ಷೆಯಲ್ಲಿ ತಾಲ್ಲೂಕಿನ ಯಶಸ್ವಿನಿ, ದೀಕ್ಷಿತಾ, ಪವಿತ್ರಾ, ತೇಜಸ್ವಿನಿ, ಕಾವ್ಯ 200ಕ್ಕೆ 200 ಅಂಕ ಪಡೆಯುವ ಮೂಲಕ ತಾಲ್ಲೂಕಿಗೆ ಕೀರ್ತಿ ತಂದಿದ್ದಾರೆ ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-17-1849450874

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.