ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಕೆಎಸ್ಆರ್ಟಿಸಿ ಡಿಪೋ ನಿರ್ಮಾಣಕ್ಕಾಗಿ ₹7 ಕೋಟಿ ಅನುದಾನ ಮಂಜೂರಾಗಿದೆ. ಆರು ತಿಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸುವುದಾಗಿ ಗುತ್ತಿಗೆದಾರರು ಭರವಸೆ ನೀಡಿದ್ದಾರೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ತಿಳಿಸಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆಗಳ ತಾಲ್ಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

ತಾಲ್ಲೂಕಿನಲ್ಲಿ ಸ್ವತಂತ್ರ ಡಿಪೋ ನಿರ್ಮಾಣವಾದರೆ ಗ್ರಾಮೀಣ ಭಾಗಗಳಿಗೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಲು ಸಾಧ್ಯವಾಗುತ್ತದೆ. ಪ್ರಸ್ತುತ ತುರುವೇಕೆರೆ ಡಿಪೋದಲ್ಲಿ ಸುಮಾರು 150 ಬಸ್ ಕೊರತೆಯಿದೆ. ತಾಲ್ಲೂಕಿನಲ್ಲಿ ಡಿಪೋ ಕಾರ್ಯಾರಂಭ ಮಾಡಿದರೆ ಸಮರ್ಪಕ ಸಾರಿಗೆ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಆಶಯ ವ್ಯಕ್ತಪಡಿಸಿದರು.

ಅನ್ನಭಾಗ್ಯ ಯೋಜನೆಗೆ ರಾಜ್ಯ ಸರ್ಕಾರದೊಂದಿಗೆ ಕೇಂದ್ರ ಸರ್ಕಾರವೂ ಸಹಕರಿಸುತ್ತಿದ್ದು, ಫಲಾನುಭವಿಗಳಿಗೆ ಸೌಲಭ್ಯ ಹೆಚ್ಚುತ್ತಿವೆ. ತೆರಿಗೆ ಪಾವತಿಸುವ ಬಡ ಜನರಿಗೂ ಈ ಯೋಜನೆಗಳು ಆಸರೆಯಾಗಿದೆ. ಯಾವುದೇ ಅರ್ಹ ಫಲಾನುಭವಿ ಯೋಜನೆಯಿಂದ ವಂಚಿತರಾಗದಂತೆ ಎಚ್ಚರಿಕೆ ವಹಿಸಬೇಕು. ಹೊಸದಾಗಿ ನೋಂದಣಿ ಮಾಡಿಕೊಳ್ಳುವವರ ದಾಖಲೆಗಳನ್ನು ಸಮರ್ಪಕವಾಗಿ ಪರಿಶೀಲಿಸಿ ಶೀಘ್ರವಾಗಿ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ತಾಲ್ಲೂಕು ವ್ಯಾಪ್ತಿಯಲ್ಲಿ 30 ಸಾರಿಗೆ ವಾಹನಗಳಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ನಿಗದಿತ ಸಮಯಕ್ಕೆ ಬಸ್ ಸಂಚರಿಸಬೇಕು. ಶಾಲಾ-ಕಾಲೇಜು ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನಿಗಾ ವಹಿಸಬೇಕು. ಗ್ಯಾರಂಟಿ ಯೋಜನೆಗಳಿಂದ ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗುತ್ತಿರುವುದು ಉತ್ತಮ ಬೆಳವಣಿಗೆ ಎಂದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಿ. ದೊಡ್ಡಸಿದ್ದಯ್ಯ ಮಾತನಾಡಿ, ಗೃಹಲಕ್ಷ್ಮಿ ಯೋಜನೆಯಡಿ ತಾಂತ್ರಿಕ ದೋಷದಿಂದ ಹಣ ಸಂದಾಯವಾಗದ ಪ್ರಕರಣಗಳನ್ನು ಕೂಡಲೇ ಗುರುತಿಸಿ, ಪಡಿತರ ಚೀಟಿ ಸಂಖ್ಯೆ ಆಧರಿಸಿ ಸಮಸ್ಯೆ ಬಗೆಹರಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಸಮಿತಿಯ ಉಪಾಧ್ಯಕ್ಷ ಎನ್. ಪಾಂಡುರಂಗಯ್ಯ, ಸಮಿತಿ ಸದಸ್ಯರು, ವ್ಯವಸ್ಥಾಪಕ ಬಸವರಾಜು, ವಿಷಯ ನಿರ್ವಾಹಕ ಮಧು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-17-1649744770

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.