ಚಿಕ್ಕನಾಯಕನಹಳ್ಳಿ: ತನ್ನ ಕುಟುಂಬದ ಪ್ರತಿಯೊಬ್ಬ ಸದಸ್ಯರ ಏಳಿಗೆಗಾಗಿ ಶ್ರಮಿಸಿ, ಅವರನ್ನು ಯಶಸ್ಸಿನ ಹಾದಿಯಲ್ಲಿ ಮುನ್ನಡೆಸುವುದೇ ಒಬ್ಬ ಮಹಿಳೆಯ ಜೀವನದ ದೊಡ್ಡ ಸಾಧನೆಯಾಗಿದೆ ಎಂದು ತಹಶೀಲ್ದಾರ್ ಮಮತಾ ಎಂ. ಹೇಳಿದರು.

ಪಟ್ಟಣದ ತೀನಂಶ್ರೀ ಭವನದಲ್ಲಿ ಭಾನುವಾರ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಹಮ್ಮಿಕೊಳ್ಳಲಾಗಿದ್ದ ‘ವಿಶ್ವ ಮಹಿಳಾ ದಿನಾಚರಣೆ’ ಹಾಗೂ ‘ಮಹಿಳಾ ಸಾಧಕರಿಗೆ ಸನ್ಮಾನ’ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಿಳೆಗೆ ಕೇವಲ ವರ್ಷದ ಒಂದು ದಿನವಷ್ಟೇ ಗೌರವ ಸೀಮಿತವಾಗಬಾರದು. ಸಮಾಜದಲ್ಲಿ ಗೌರವ ಸಿಗುವಂತೆ ಪ್ರತಿಯೊಬ್ಬ ಮಹಿಳೆಯೂ ಸಾಧನೆ ಮಾಡಬೇಕು. ಮೊದಲು ಹೆಣ್ಣು ಮತ್ತೊಬ್ಬ ಹೆಣ್ಣಿಗೆ ಗೌರವ ನೀಡುವ ಗುಣ ಬೆಳೆಸಿಕೊಳ್ಳಬೇಕು. ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುತ್ತಿರುವ ಶೋಷಣೆಗಳು ನಿಲ್ಲಬೇಕು. ನಮ್ಮೊಳಗೆ ನಾವು ಮೊದಲು ಸಮಾನತೆ ಕಂಡುಕೊಂಡಾಗ ಮಾತ್ರ ಸಮಾಜದಿಂದ ಸಮಾನತೆ ನಿರೀಕ್ಷಿಸಲು ಸಾಧ್ಯ ಎಂದು ಹೇಳಿದರು.

ಪ್ರತಿಯೊಬ್ಬ ಮಹಿಳೆಯಲ್ಲೂ ಅದ್ಭುತ ಶಕ್ತಿಯಿದೆ. ಆ ಶಕ್ತಿಯು ನಮಗೆ ಎದುರಾಗುವ ಸಮಸ್ಯೆಗಳ ಸಂದರ್ಭದಲ್ಲಿ ಹಾಗೂ ದೊರೆಯುವ ಅವಕಾಶಗಳಲ್ಲಿ ಅನಾವರಣಗೊಳ್ಳುತ್ತದೆ. ಅದನ್ನು ಸದ್ಬಳಕೆ ಮಾಡಿಕೊಂಡು ಯಾವುದೇ ಕ್ಷೇತ್ರದಲ್ಲಾದರೂ ಮುನ್ನಡೆಯಬೇಕು ಎಂದರು.

ಹೆಣ್ಣು ಕಲಿತರೆ ಒಂದು ಕುಟುಂಬ ಮಾತ್ರವಲ್ಲ, ಇಡೀ ಸಮಾಜವೇ ಕಲಿತಂತೆ ಎಂಬ ಮಾತಿದೆ. ಇದು ಮಹಿಳೆಗೆ ಇರುವ ದಿವ್ಯ ಶಕ್ತಿಯನ್ನು ಬಿಂಬಿಸುತ್ತದೆ. ಸಂಭ್ರಮಾಚರಣೆ ಕೇವಲ ವೇದಿಕೆಗೆ ಸೀಮಿತವಾಗದೆ, ಪ್ರಾಯೋಗಿಕವಾಗಿ ಪ್ರತಿದಿನವೂ ಪ್ರತಿ ಕ್ಷೇತ್ರದಲ್ಲೂ ಮಹಿಳೆಯರಿಗೆ ಸೂಕ್ತ ಅವಕಾಶ ಮತ್ತು ಸ್ಥಾನಮಾನಗಳು ದೊರೆಯುವಂತಾಗಬೇಕು ಎಂದು ಕರೆ ನೀಡಿದರು.

ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಗವಿರಂಗಯ್ಯ, ಆರ್.ಪರಶಿವಮೂರ್ತಿ, ಸಿಡಿಪಿಒ ಹೊನ್ನಪ್ಪ, ದೇವರಾಜು, ಪ್ರಿಯಾಂಕ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.