ಮಂಜುನಾಥ್

ಚಿಕ್ಕನಾಯಕನಹಳ್ಳಿ: ಚಿಕ್ಕನಾಯಕನಹಳ್ಳಿ ಪಟ್ಟಣವು ವೇಗವಾಗಿ ಬೆಳೆಯುತ್ತಿದೆ. ಇದರ ಜೊತೆಗೆ ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ರಸ್ತೆ ಅಪಘಾತಗಳ ಸಂಖ್ಯೆಯೂ ಮಿತಿಮೀರಿದ್ದು, ಜನಸಾಮಾನ್ಯರು ರಸ್ತೆಗಿಳಿಯಲು ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಹೆಚ್ಚುತ್ತಿರುವ ವಾಹನಗಳ ದಟ್ಟಣೆಯಿಂದಾಗಿ ಪಟ್ಟಣವು ಅಪಘಾತಗಳ ಕೇಂದ್ರವಾಗುತ್ತಿದೆ ಎಂದು ಸ್ಥಳೀಯರು ದೂರುತ್ತಾರೆ.

‘ವಾಹನ ಸವಾರರು ರಸ್ತೆ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ ವಾಹನಗಳನ್ನು ಚಲಾಯಿಸುತ್ತಿರುವುದು ಮತ್ತು ಈ ಬಗ್ಗೆ ಸಂಚಾರ ಪೊಲೀಸರು ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ನಿರ್ಲಕ್ಷ್ಯತೆಯಿಂದಾಗಿ ಜನರು ಜೀವ ಕೈಯಲ್ಲಿಡು ಓಡಾಡುವ ಅನಿವಾರ್ಯತೆ ಎದುರಾಗಿದೆ’ ಎಂದು ಸ್ಥಳೀಯರು ಆರೋಪಿಸುತ್ತಾರೆ.

ಪಟ್ಟಣದಲ್ಲಿ ಕೇವಲ ಒಂದು ವಾರದಲ್ಲಿ 3 ಅಪಘಾತ ಪ್ರಕರಣಗಳು ದಾಖಲಾಗಿವೆ. ವೇಗದ ಮತ್ತು ಚಾಲಕರ ಅಜಾಗರೂಕತೆಯಿಂದ ಅಪಘಾತಗಳು ಸಂಭವಿಸುತ್ತಿವೆ. ಪಟ್ಟಣದ ಹೃದಯ ಭಾಗದಲ್ಲಿ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 150 ಎ ಅಪಘಾತಗಳ ಕೇಂದ್ರ ಸ್ಥಾನವಾಗಿದೆ. ಹೆದ್ದಾರಿಯ ಪ್ರಮುಖ ತಿರುವುಗಳಲ್ಲಿ ಹಾಗೂ ಜನನಿಬಿಡ ಕೇಂದ್ರಗಳಲ್ಲಿ ‘ವೇಗ ನಿಯಂತ್ರಕ’ ಅಳವಡಿಸದಿರುವುದು ದುರಂತಕ್ಕೆ ದಾರಿ ಮಾಡಿಕೊಡುತ್ತಿದೆ. ಈ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಾರೆ.

ಸರಕು ಸಾಗಣೆ ವಾಹನಗಳು ಪಟ್ಟಣದ ಕಿರಿದಾದ ರಸ್ತೆಗಳಲ್ಲಿ ಅತಿ ವೇಗವಾಗಿ ಚಲಿಸುತ್ತಿವೆ. ಸಂಚಾರಿ ನಿಯಮಗಳನ್ನು ಪಾಲಿಸದಿರುವುದು ಅಪಘಾತ ಹೆಚ್ಚಳಕ್ಕೆ ಕಾರಣವಾಗಿದೆ. ಪಟ್ಟಣದಲ್ಲಿ ಸಂಚಾರಿ ಪೋಲಿಸರ ಕಣ್ಗಾವಲು ಕಡಿಮೆಯಾಗಿದೆ ಎಂಬುದು ಸ್ಥಳೀಯರ ವಾದ. ಇನ್ನಾದರೂ ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕು ಎಂಬುದು ಈ ಭಾಗದ ಜನರ ಒತ್ತಾಯ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-17-1427537663

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.