ಚಿಕ್ಕನಾಯಕನಹಳ್ಳಿ: ಕಾರ್ಮಿಕರು ತಮ್ಮ ಜೀವನವನ್ನು ಕೇವಲ ದುಡಿಮೆಗೆ ಸೀಮಿತಗೊಳಿಸದೆ, ಆರೋಗ್ಯದ ಕಡೆಗೂ ಹೆಚ್ಚಿನ ಗಮನ ಹರಿಸಬೇಕು. ಕಾರ್ಮಿಕರ ಹಿತದೃಷ್ಟಿಯಿಂದ ಸ್ವಂತ ಕಟ್ಟಡ ನಿರ್ಮಾಣಕ್ಕಾಗಿ ಸಂಘದ ಹೆಸರಿನಲ್ಲಿ ಒಂದು ವಾರದೊಳಗೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಶಾಸಕ ಸಿ.ಬಿ. ಸುರೇಶ್ ಬಾಬು ಭರವಸೆ ನೀಡಿದರು.

ಪಟ್ಟಣದ ಮಾರುಕಟ್ಟೆ ಆವರಣದ ವೆಂಕಟರಮಣ ದೇವಾಲಯದ ಬಳಿ ಶುಕ್ರವಾರ ತಾಲ್ಲೂಕು ಕಟ್ಟಡ ಕಾರ್ಮಿಕರ ಸಂಘದಿಂದ ನಡೆದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕಾರ್ಮಿಕ ಇಲಾಖೆಯು ಆಹಾರ ಕಿಟ್ ಸೇರಿದಂತೆ ಹತ್ತು ಹಲವು ಸೌಲಭ್ಯಗಳನ್ನು ನೀಡುತ್ತಿದೆ. ಕಾರ್ಮಿಕರು ಕಡ್ಡಾಯವಾಗಿ ಕಾರ್ಮಿಕ ಕಾರ್ಡ್ ಪಡೆದುಕೊಳ್ಳಬೇಕು ಹಾಗೂ ಅದನ್ನು ಪ್ರತಿವರ್ಷ ನವೀಕರಿಸಿಕೊಳ್ಳುವ ಮೂಲಕ ಸರ್ಕಾರದ ಸವಲತ್ತುಗಳನ್ನು ಪಡೆಯಬೇಕು ಎಂದರು.

ತಾಲ್ಲೂಕು ಕಟ್ಟಡ ಕಾರ್ಮಿಕ ಘಟಕದ ಅಧ್ಯಕ್ಷ ಕುಮಾರ್ ಮಾತನಾಡಿ, ತಾಲ್ಲೂಕಿನಲ್ಲಿ 13 ಸಾವಿರಕ್ಕೂ ಹೆಚ್ಚು ಕಾರ್ಮಿಕರಿದ್ದರೂ, ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಬಾರದಿರುವುದು ವಿಷಾದನೀಯ. ವರ್ಷಕ್ಕೊಮ್ಮೆ ನಡೆಯುವ ಇಂತಹ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಾಹಿತಿ ಪಡೆಯುವುದು ಅತ್ಯಗತ್ಯ ಎಂದರು.

ಖಜಾಂಚಿ ರವಿಕುಮಾರ್ ಪಲ್ಲಕ್ಕಿ ಮಾತನಾಡಿ, ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವಂತೆ ಹಾಗೂ ವಿದ್ಯಾರ್ಥಿ ವೇತನದ ಸೌಲಭ್ಯ ಪಡೆಯುವಲ್ಲಿ ಎದುರಾಗುತ್ತಿರುವ ಅಡೆತಡೆಗಳನ್ನು ನಿವಾರಿಸಿಕೊಳ್ಳುವಂತೆ ಸಲಹೆ ನೀಡಿದರು.

ಸಮಾರಂಭದಲ್ಲಿ ಕಾರ್ಮಿಕರಾದ ವೀರಲಕ್ಕಮ್ಮ ಬಡಾವಣೆಯ ರಂಗಯ್ಯ, ಮಹಾಲಕ್ಷ್ಮಿ ಬಡಾವಣೆಯ ಜಗದೀಶ್, ನಡುವನಹಳ್ಳಿಯ ದೇವರಾಜು ಅವರನ್ನು ಸತ್ಕರಿಸಲಾಯಿತು. ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಕಾರ್ಮಿಕರ ಮಕ್ಕಳನ್ನು ಪುರಸ್ಕರಿಸಲಾಯಿತು.

ಗ್ಯಾರಂಟಿ ಯೋಜನಾ ಸಮಿತಿ ತಾಲ್ಲೂಕು ಅಧ್ಯಕ್ಷ ಸಿ.ಡಿ. ಚಂದ್ರಶೇಖರ್ ಮಾತನಾಡಿದರು. ಸಂಘದ ಪ್ರಮುಖರಾದ ಸಿ.ಎಸ್. ನಾಗರಾಜು, ಸಿ.ಜಿ. ಪ್ರಕಾಶ್, ಮೂರ್ತಣ್ಣ, ಯುವರಾಜು, ವಿಶ್ವನಾಥ್, ಶಂಕರ್ ನಾರಾಯಣ್, ಎ.ಎಂ. ಸೋಮಶೇಖರ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-17-1612724972

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.